Thursday, September 19, 2024

ಇಂದಿನಿಂದ SSLC ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ‘ಆಲ್ ದಿ ಬೆಸ್ಟ್’

ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಆರಂಭವಾಗಲಿದೆ. ಪರೀಕ್ಷೆ ಬರೆಯುತ್ತಿರುವ ಎಲ್ಲಾ ಮಕ್ಕಳಿಗೂ ಆಲ್ ದಿ ಬೆಸ್ಟ್.

ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದ 2,750 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ಏ.6ರವರೆಗೆ ಪರೀಕ್ಷೆಗಳು ನಡೆಯಲಿವೆ. ಇನ್ನೂ, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಬಾರಿ ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 8,10,368 ರೆಗ್ಯುಲರ್ ವಿದ್ಯಾರ್ಥಿಗಳಾಗಿದ್ದಾರೆ. 18,225 ಖಾಸಗಿ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ರೆ, 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ. ಒಟ್ಟು ವಿದ್ಯಾರ್ಥಿಗಳ ಪೈಕಿ 4,41,910 ಬಾಲಕರು ಮತ್ತು 4,28,058 ಬಾಲಕಿಯರು ಪರೀಕ್ಷೆಯನ್ನು ಬರೆಯುತ್ತಿದ್ದಾರೆ.

ಪರೀಕ್ಷೆ ನಡೆಸಲು ಸಕಲ ಸಿದ್ಧತೆ

ಈ ಬಗ್ಗೆ ಪರೀಕ್ಷಾ ಮಂಡಳಿ ಅಧ್ಯಕ್ಷ ಮಂಜುಶ್ರೀ ಮಾಹಿತಿ ನೀಡಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್‌ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೀಗಿದೆ ಪರೀಕ್ಷಾ ವೇಳಾಪಟ್ಟಿ

  • ಮಾರ್ಚ್ 25 : ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್​​​​ಸಿಇಆರ್​​ಟಿ), ಸಂಸ್ಕೃತ (ಪ್ರಥಮ ಭಾಷೆ)
  • ಮಾರ್ಚ್ 27 : ಸಮಾಜ ವಿಜ್ಞಾನ
  • ಮಾರ್ಚ್ 30 : ವಿಜ್ಞಾನ
  • ಏಪ್ರಿಲ್ 2 : ಗಣಿತ
  • ಏಪ್ರಿಲ್ 3 : ಅರ್ಥಶಾಸ್ತ್ರ
  • ಏಪ್ರಿಲ್ 4 : ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ (ತೃತೀಯ ಭಾಷೆ)
  • ಏಪ್ರಿಲ್ 6 : ಇಂಗ್ಲಿಷ್, ಕನ್ನಡ (ದ್ವಿತೀಯ ಭಾಷೆ)

RELATED ARTICLES

Related Articles

TRENDING ARTICLES