Sunday, May 12, 2024

ಹಾಸನ JDS​ ಅಭ್ಯರ್ಥಿ ಪರ ಕೆಲಸ ಮಾಡಲು BJP ವಿರೋಧ ಹೇಳಿಕೆ ಸುಳ್ಳು: ರಾಧಾಮೋಹನ್​ದಾಸ್​

ಹಾಸನ : ಹಾಸನದಲ್ಲಿ ಮಾಜಿ ಶಾಸಕ ಪ್ರೀತಂಗೌಡ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿಲ್ಲ ಎನ್ನುವ ಆರೋಪಗಳು ಕೇಳಿಬರುತ್ತಿದ್ದು ಈ ಕುರಿತು ರಾಜ್ಯ ಬಿಜೆಪಿ ಚುನಾವಣೆ ಉಸ್ತುವಾರಿ ರಾಧಾಮೋಹನ್​ ದಾಸ್​ ಅಗರ್ವಾಲ್​ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ಪರ‌ ಕೆಲಸ ಮಾಡುತ್ತಿಲ್ಲ ಎನ್ನುವುದು ತಪ್ಪು ನಮ್ಮ ಕಾರ್ಯಕರ್ತರು ಪೂರ್ತಿ ಶಕ್ತಿಯೊಂದಿಗೆ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಣೆ ಆಗುವುದನ್ನು ಕಾಯ್ತಾ ಇದ್ದಾರೆ,  ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತರ ಹೆಗಲಿಗೆ ಹೆಗಲು ಕೊಟ್ಟು ಯುದ್ದದಲ್ಲಿ ಹೋರಾಡುತ್ತಾರೆ.

ಇದನ್ನೂ ಓದಿ: ನಾನೇನು ಉತ್ತರ ಕೊಡಲ್ಲ..! ಸಿದ್ದರಾಮಯ್ಯ ಆರೋಪಕ್ಕೆ ಸೊಪ್ಪು ಹಾಕದ ಯಡಿಯೂರಪ್ಪ

ಕಳೆದ ಚುನಾವಣೆಯಲ್ಲಿ ಬಿಜೆಪಿಗೆ ಐದು ಲಕ್ಷ ಮತಗಳು ಬಂದಿದ್ದವು ಈ ಭಾರಿ ಜೆಡಿಎಸ್ ಐದು ಲಕ್ಷ ಬಿಜೆಪಿ ಐದು ಲಕ್ಷ ಮತಗಳು ಸೇರಿ ಹತ್ತು ಲಕ್ಷ ಮತಗಳು ಸಿಗುತ್ತವೆ, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಅವರ ಅಭಿಪ್ರಾಯ ಹೇಳುವ ಅಧಿಕಾರ ಇರುತ್ತೆ. ಆದರೆ ಅಭ್ಯರ್ಥಿ ಘೋಷಣೆ ಆಗುವ ಮುಂಚೆ ಆಡುವ ಮಾತುಗಳಿಗೆ ಮಹತ್ವ ಕೊಡಬೇಕಿಲ್ಲ ಅಭ್ಯರ್ಥಿ ಘೋಷಣೆ ನಂತರ ಕಾರ್ಯಕರ್ತರು ಏನು ಮಾಡುತ್ತಾರೆ ಅನ್ನೋದನ್ನ ನೋಡಬೇಕು ಎಂದರು.

ಬಿಜೆಪಿ ಕಾರ್ಯಕರ್ತರ ಭಾವನೆ ಎಚ್.ಡಿ.ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ತಲುಪಿದೆ
ಆದರೆ ಜೆಡಿಎಸ್ ಅಭ್ಯರ್ಥಿ ಯಾರು ಆಗುತ್ತಾರೆ ಅನ್ನೋದನ್ನ ಬಿಜೆಪಿ ತೀರ್ಮಾನಿಸಲ್ಲ ಅದನ್ನು ಜೆಡಿಎಸ್ ತೀರ್ಮಾನಿಸುತ್ತೆ. ಜೆಡಿಎಸ್ ಯಾರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತದೆಯೋ ಅವರ ಪರವಾಗಿ ಬಿಜೆಪಿಯ ಎಲ್ಲಾ ಶಾಸಕರು, ಕಾರ್ಯಕರ್ತರು ಪೂರ್ಣ ಶಕ್ತಿಯೊಂದಿಗೆ ಕೆಲಸ ಮಾಡ್ತಾರೆ ಎಂದು ಅವರು ಹೇಳಿದರು.

RELATED ARTICLES

Related Articles

TRENDING ARTICLES