Saturday, May 18, 2024

ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಗ್ರಾಮಾಂತರ : ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರೀಲ್ 26 ರಂದು ಮತದಾನ ನಡೆಸಲು ಹಾಗೂ ಜೂನ್ 4 ರಂದು ಮತ ಎಣಿಕೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.

ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತ್ತು ಮತದಾನ ಮುಕ್ತಾಯವಾಗುವ 48 ಗಂಟೆಗಳ ಅವಧಿಯೊಳಗಿನ ದಿನಗಳು ಮತ್ತು ಮತ ಎಣಿಕೆಯ ದಿನದಂದು ಹಾಗೂ ಚುನಾವಣಾ ಸಂದರ್ಭದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ಘಾಟಿ ಸುಬ್ರಹ್ಮಣ್ಯ ದೇವಾಲಯ ಹುಂಡಿ ಎಣಿಕೆ: 53 ಲಕ್ಷಕ್ಕು ಹೆಚ್ಚು ಹಣ ಸಂಗ್ರಹ

ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಏಪ್ರೀಲ್ 24 ರಂದು ಸಂಜೆ 5 ಗಂಟೆಯಿಂದ ಏಪ್ರೀಲ್ 26 ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಜೂನ್ 03 ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್4 ಮಧ್ಯರಾತ್ರಿ 12ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮದ್ಯ ಉತ್ಪಾದನೆ, ಮಾರಟ, ಹಂಚಿಕೆ, ಸಾಗಾಣಿಕೆ, ಶೇಖರಣೆ, ಇತ್ಯಾದಿಗಳನ್ನು ನಿಷೇಧಿಸಿ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ, ಬಿಯರ್, ತಯಾರಿಕಾ ಡಿಸ್ಟಿಲರಿ/ ಬ್ರಿವರಿ/ವೈನರಿಗಳನ್ನು, ಸ್ಟಾರ್ ಹೋಟೆಲ್ಗಳನ್ನು ಮುಚ್ಚಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಆದೇಶಿಸಿದ್ದಾರೆ.

RELATED ARTICLES

Related Articles

TRENDING ARTICLES