Saturday, May 18, 2024

ನಾನು ಸಿಎಂ ಆಗ್ತೇನೆ : ಡಿಕೆಶಿ ಸ್ಫೋಟಕ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಸಿಎಂ ಸಿದ್ದರಾಮಯ್ಯಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮುಖ್ಯಮಂತ್ರಿ ಹುದ್ದೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ನಾನು ಸಿಎಂ ಆಗುತ್ತೇನೆ ಎಂದು ಹೇಳಿದ್ದಾರೆ.

ರಾಜಕಾರಣದಲ್ಲಿ ಏನು ಬೇಕಾದರೂ ನಡೆಯುತ್ತದೆ. ಯಾರಿಗೂ, ಯಾವುದೂ ಶಾಶ್ವತವಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂಬುದನ್ನು ಶಿವಕುಮಾರ್ ಬಹಿರಂಗ ಪಡಿಸಿದ್ದಾರೆ.

ಮತ್ತೊಮ್ಮೆ ಸಿಎಂ ಬದಲಾವಣೆ ಕೂಗು

ಇನ್ನೂ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೆಲ ಸಚಿವರು ಹಾಗೂ ಶಾಸಕರು ಅಧಿಕಾರ ಹಂಚಿಕೆ ಕುರಿತು ಬಹಿರಂಗ ಹೇಳಿಕೆ ನೀಡುತ್ತಲೇ ಇದ್ದಾರೆ. ಒಂದೆಡೆ, ಸ್ವತಃ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಸಹ ತಮ್ಮ ತಂದೆಯೇ ಪೂರ್ಣಾವಧಿ ಸಿಎಂ ಎಂದು ಹೇಳಿದ್ದರು. ಇದೀಗ ರಾಜ್ಯದಲ್ಲಿ ಮತ್ತೊಮ್ಮೆ ಸಿಎಂ ಬದಲಾವಣೆ ಕೂಗು ಕೇಳಿ ಬಂದಿದೆ.

ಕಾಂಗ್ರೆಸ್ ಒಗ್ಗಟ್ಟಾಗಿದ್ದಾಗ ದೇಶ ಒಗ್ಗಟ್ಟಾಗುತ್ತದೆ

ಕಾಂಗ್ರೆಸ್ ಪಕ್ಷವನ್ನು ಒಗ್ಗಟ್ಟಾಗಿ ಇಡಲು ಗಾಂಧಿ ಕುಟುಂಬದಿಂದ ಮಾತ್ರ ಸಾಧ್ಯ. ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿದ್ದಾಗ ದೇಶ ಒಗ್ಗಟ್ಟಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

2 ದಿನ ಡಿಕೆಶಿ​ ಟೆಂಪಲ್​​​ ರನ್

ಇಂದಿನಿಂದ 2 ದಿನ ಡಿಸಿಎಂ ಡಿ.ಕೆ. ಶಿವಕುಮಾರ್​ ಟೆಂಪಲ್​​​ ರನ್ ಮಾಡಲಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರಕ್ಕೂ ಮುನ್ನ ಡಿಕೆಶಿ​​ ದೇವರ ಮೊರೆ ಹೋಗಿದ್ದಾರೆ. ವಿವಿಧ ದೇವಸ್ಥಾನಗಳಲ್ಲಿ ಡಿ.ಕೆ. ಶಿವಕುಮಾರ್ ಪೂಜೆ ಸಲ್ಲಿಸಲಿದ್ದಾರೆ. ಧರ್ಮಸ್ಥಳ ಮಂಜುನಾಥ ಸ್ವಾಮಿ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ, ಶೃಂಗೇರಿ ಶಾರದಾಂಬೆ, ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ.

RELATED ARTICLES

Related Articles

TRENDING ARTICLES