Sunday, May 12, 2024

ಯುದ್ಧ ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ ದರ್ಶನ ಪಡೆದಿದ್ದೇನೆ : ಡಿ.ಕೆ. ಶಿವಕುಮಾರ್

ಧರ್ಮಸ್ಥಳ : ಯುದ್ಧ ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ ದರ್ಶನ ಪಡೆದಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಯಾವಾಗಲೂ ಧರ್ಮ ಯುದ್ಧದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಅದೇ ರೀತಿ ಈ ಬಾರಿಯೂ ಇಲ್ಲಿಗೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.

ಮಾತು ಬಿಡದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ ಎಂಬ ಮಾತಿದೆ. ಮಂಜುನಾಥ, ಈಶ್ವರ, ಗಂಗಾಧರ ಅಜ್ಜ ನನ್ನನ್ನು ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಹಾಗಾಗಿ, ಈ ಯುದ್ಧ ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ, ಅಣ್ಣಪ್ಪಸ್ವಾಮಿ ದರ್ಶನ ಮಾಡಿ ಆಶೀರ್ವಾದ ಪಡೆಯುವ ಪದ್ಧತಿ ಇಟ್ಟುಕೊಂಡಿದ್ದೇನೆ ಎಂದಿದ್ದಾರೆ.

ಆತ ಮಾತು ಬಿಡದ ಮಂಜುನಾಥ

ಮಂಜುನಾಥ ಸ್ವಾಮಿ ಧರ್ಮಸ್ಥಳದ ಶಕ್ತಿ. ಆತ ಮಾತು ಬಿಡದ ಮಂಜುನಾಥ. ನಾನು ರೂಢಿ ಮಾಡಿಕೊಂಡಿರುವ ಪರಂಪರೆಯಂತೆ ಇವತ್ತು ಇಲ್ಲಿಗೆ ಬಂದು ಮಂಜುನಾಥನ ದರ್ಶನ ಪಡೆದು ಹೊರಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಹೆಚ್ಚು ಶಕ್ತಿ ಕೊಡು ಅಂತ ಪ್ರಾರ್ಥನೆ ಸಲ್ಲಿಸಿದೆ

ನಾವು ಐದು ಉಚಿತ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಇನ್ನೂ ಹೆಚ್ಚು ಶಕ್ತಿ ಕೊಡು ಎಂದು ಮಂಜುನಾಥನಲ್ಲಿ ಪ್ರಾರ್ಥನೆ ಮಾಡಲು ಬಂದಿದ್ದೇನೆ. ನುಡಿದಂತೆ ನಡೆಯಲು ಆ ದೇವರು ಶಕ್ತಿ ಕೊಟ್ಟಿದ್ದಾನೆ. ಇದು ನಮ್ಮ ಭಾಗ್ಯ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES