Thursday, May 9, 2024

ಭಾರಿ ಮಳೆ.. ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯಾದ್ಯಂತ ಬಿಸಲಿ ಝಳ ಏರುತ್ತಿರುವ ಮಧ್ಯೆಯೇ ಹವಾಮಾನ ಇಲಾಖೆ ರೈತಾಪಿ ವರ್ಗಕ್ಕೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸಹ ಹೇಳಿದ್ದಾರೆ.

ಮಾರ್ಚ್​ 31ರಿಂದ ಮೂರು ದಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಿದೆ. ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕರಾವಳಿ ಹಾಗೂ ಮಲೆನಾಡಿನ ಕೆಲವು ಪ್ರದೇಶಗಳಲ್ಲಿ ಇಂದು ಸಹ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ, ಪಶ್ಚಿಮ ಬಂಗಾಳ, ದೆಹಲಿ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ. ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 39.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಿರುಗಾಳಿ ಆರ್ಭಟ, ಮನೆಗಳ ಛಾವಣಿ ಕುಸಿತ

ಬಿರುಗಾಳಿ ರಭಸಕ್ಕೆ 7 ರಿಂದ 8 ಮನೆಗಳ ಛಾವಣಿ ಮುರಿದು ಹೋದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ನಡೆದಿದೆ. ಬಿರುಗಾಳಿ ಹೊಡೆತಕ್ಕೆ ಗ್ರಾಮದ ಜನರ ತತ್ತರಿಸಿ ಹೋಗಿದ್ದಾರೆ. ವಿದ್ಯುತ್ ಲೇನ್ ಕೂಡ ತುಂಡು, ಬಿರುಗಾಳಿಗೆ ಶಾರ್ಟ್ ಸರ್ಕ್ಯೂಟ್ ಆಗಿದೆ. ಇದರಿಂದ 3 ಮನೆಯ ಟಿವಿಗಳು ಹಾಗೂ ವಿದ್ಯುತ್ ಉಪಕರಣಗಳು ಸುಟ್ಟು ಕರಕಲಾಗಿದೆ.

RELATED ARTICLES

Related Articles

TRENDING ARTICLES