Saturday, May 4, 2024

4 ಕೋಟಿ ಮೌಲ್ಯದ ಚಿನ್ನ,ವಜ್ರ ಬೆಳ್ಳಿ ವಶಕ್ಕೆ ಪಡೆದ ಪೊಲೀಸರು

ಚಿಕ್ಕಮಗಳೂರು: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಾಲ್ಕು ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿವನ್ನು ಪೊಲೀಸ್​ರು ವಶಕ್ಕೆ ಪಡೆದ ಘಟನೆ ಜಿಲ್ಲೆಯ ತರಿಕೆರೆ ತಾಲೂಕಿನ ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ.

ಹೌದು, 6 ಕೆಜಿ 586 ಗ್ರಾಂ ಚಿನ್ನ, 1 ಕೆಜಿ 71.492 ಗ್ರಾಂ ವಜ್ರಾಭರಣ, 1 ಕೆಜಿ ಬೆಳ್ಳಿ ವಸ್ತುಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬಂದ ಒಂದು ಕಾರು ಪೊಲೀಸರಿಗೆ ಅನುಮಾನ ಹುಟ್ಟಿಸಿದೆ. ಹೀಗಾಗಿ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ಕೋಟ್ಯಂತರ ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿವೆ.

ಸಾಗಿಸಲಾಗುತ್ತಿದ್ದ ಚಿನ್ನ, ಬೆಳ್ಳಿ, ಡೈಮಂಡ್​ಗಳ ದಾಖಲೆಗಳನ್ನು ಕೇಳಿದಾಗ ಸಂಬಂಧಪಟ್ಟವರು ದಾಖಲೆ ನೀಡಿಲ್ಲ. ಹೀಗಾಗಿ ಚಿನ್ನಾಭರಣಗಳನ್ನು ಪೊಲೀಸರು ಜಪ್ತಿ ಮಾಡಿ ಚಿನ್ನಾಭರಣದ ಮೂಲದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಘಟನೆಯ ವಿವರ

ಬೆಂಗಳೂರಿನಿಂದ ಶಿವಮೊಗ್ಗ ಜಿಲ್ಲೆಗೆ ಕೋಟ್ಯಂತರ ಮೌಲ್ಯದ ಚಿನ್ನ, ಡೈಮಂಡ್ಸ್ ಹಾಗೂ ಬೆಳ್ಳಿ ವಸ್ತುಗಳನ್ನು ಟ್ರಕ್ ಮೂಲಕ ಸಾಗಾಟ ಮಾಡಲಾಗುತ್ತಿತ್ತು. ಈ  ವೇಳೆ ಚುನಾವಣಾಧಿಕಾರಿಗಳು, ಪೊಲೀಸರು ಟ್ರಕ್ ತಡೆದು ಪರಿಶೀಲನೆ ನಡೆಸಿದಾಗ ಚಿನ್ನಾಭರಣಗಳನ್ನು ಸಾಗಿಸುತ್ತಿರುವ ವಿಚಾರ ತಿಳಿದುಬಂದಿದೆ. ಪ್ರಾಥಮಿಕ ತನಿಖೆ ವೇಳೆ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿರುವುದು ತಿಳಿದುಬಂದ ಹಿನ್ನೆಲೆ ಅವುಗಳನ್ನು ವಶಕ್ಕೆ ಪಡೆದಿದ್ದಾರೆ.

 

RELATED ARTICLES

Related Articles

TRENDING ARTICLES