Friday, May 17, 2024

IPL​ 2024: ಹೈದರಾಬಾದ್ ವಿರುದ್ಧ ಟಾಸ್​ ಗೆದ್ದ ಮುಂಬೈ ಬೌಲಿಂಗ್​ ಆಯ್ಕೆ

ಹೈದರಾಬಾದ್: ಐಪಿಎಲ್​ನ ಇಂದಿನ ಪಂದ್ಯದಲ್ಲಿ ಮೊದಲ ಪಂದ್ಯಗಳಲ್ಲಿ ಸೋಲು ಕಂಡಿರುವ ಎರಡು ತಂಡಗಳು ಗೆಲುವಿಗಾಗಿ ಸೆಣಸಲಿವೆ.

ಹೌದು, ರಾಜೀವ್​ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸನ್​ರೈಸರ್ಸ್ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಟಾಸ್​ ಗೆದ್ದು ಬೌಲಿಂಗ್​ ಆಯ್ದುಕೊಂಡಿದೆ.

ಕೆಕೆಆರ್​ ವಿರುದ್ಧದ ಮೊದಲ ಪಂದ್ಯದಲ್ಲಿ ಹೈದರಾಬಾದ್ ಕೊನೆ ಓವರ್​ನಲ್ಲಿ ಸೋಲು ಕಂಡಿತ್ತು. ಮಾಜಿ ಚಾಂಪಿಯನ್​ ಮುಂಬೈ ಕೂಡ ಗುಜರಾತ್ ಟೈಟಾನ್ಸ್​ ವಿರುದ್ಧ ಕೊನೆಯ ಓವರ್​ನಲ್ಲಿ ಸೋಲು ಕಂಡಿತ್ತು. ಈ ಎರಡು ತಂಡಗಳು ಇಂದು ಗೆಲುವಿನ ನಿರೀಕ್ಷೆಯಲ್ಲಿವೆ.

2020 ರಿಂದ ಮುಂಬೈ ಹಾಗೂ ಹೈದರಾಬಾದ್ 7 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ 5 ಪಂದ್ಯಗಳಲ್ಲಿ ಮುಂಬೈ ಗೆಲುವು ಸಾಧಿಸಿದೆ. ಹೈದರಾಬಾದ್ 2 ಬಾರಿ ಗೆಲುವು ಕಂಡಿದೆ.

ಮುಂಬೈ ಇಂಡಿಯನ್ಸ್ (ಸಂಭವನೀಯ ತಂಡ)

ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ನಮನ್ ಧೀರ್, ಟಿಮ್ ಡೇವಿಡ್, ಶಮ್ಸ್ ಮುಲಾನಿ, ಪಿಯೂಷ್ ಚಾವ್ಲಾ, ಜೆರಾಲ್ಡ್ ಕೋಟ್ಜಿ, ಜಸ್ಪ್ರೀತ್ ಬುಮ್ರಾ, ಲ್ಯೂಕ್ ವುಡ್

ಸನ್‌ರೈಸರ್ಸ್ ಹೈದರಾಬಾದ್ (ಸಂಭವನೀಯ ತಂಡ)

ಪ್ಯಾಟ್ ಕಮಿನ್ಸ್(ನಾಯಕ), ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಮಾರ್ಕೊ ಯಾನ್ಸನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ ನಟರಾಜನ್.

 

RELATED ARTICLES

Related Articles

TRENDING ARTICLES