Thursday, May 9, 2024

ಲೋಕಸಮರ : ನಾಳೆ ಡಿಕೆ‌ ಸುರೇಶ್ ನಾಮಪತ್ರ ಸಲ್ಲಿಕೆ: ತಾಯಿ ಆಶೀರ್ವಾದ ಪಡೆದ ಸುರೇಶ್​​

ರಾಮನಗರ: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್​ ಅವರು ನಾಳೆ (ಮಾ.28) ರಂದು ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿಕೆ ಸುರೇಶ್ ಅವರು ನಾಳೆ ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಿಗೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಜೂನಿಯರ್ ಕಾಲೇಜು ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೂ ಬೃಹತ್ ಮೆರವಣಿಗೆ ನಡೆಸಲಿದ್ದಾರೆ. ಬಳಿಕ ಬಹಿರಂಗ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ.

ಕಳೆದ ಲೋಕಸಮರದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್​ ಭರ್ಜರಿ ಗೆಲುವು ಸಾಧಿಸುವ ಮೂಲಕ ಬಿಜೆಪಿಯ ಕ್ಲೀನ್​ ಸ್ವೀಪ್​ ಗೆ ಕಾಂಗ್ರೆಸ್​ ತಡೆ ಹಾಕಿತ್ತು. ಇದರೊಂದಿಗೆ ಕಾಂಗ್ರೆಸ್​ ಪಕ್ಷಕ್ಕೆ ಭಾರಿ ಮುಖಭಂಗವಾಗುವುದನ್ನು ತಪ್ಪಿಸಿತ್ತು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದು ತಮ್ಮ ಗ್ಯಾರೆಂಟಿಗಳ ಅನುಷ್ಟಾನವನ್ನು ಪ್ರಮುಖ ಅಸ್ತ್ರವನ್ನಾಗಿಟ್ಟುಕೊಂಡು ಕನಿಷ್ಟ 20 ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಶತಪ್ರಯತ್ನ ಮಾಡುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ಕೋಲಾರದಲ್ಲಿ ಅಭ್ಯರ್ಥಿಗಳ ಆಯ್ಕೆ ಗೊಂದಲ ಶಮನ ಆಗುತ್ತೆ : ಡಿಕೆ ಶಿವಕುಮಾರ್​

ಸಮಾವೇಶದಲ್ಲಿ ಭಾಗಿಯಾಗಲಿರುವ ಘಟಾನುಘಟಿ ನಾಯಕರು :

ಮಾರ್ಚ್​ 28 ರಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಹಾಲಿ ಸಂಸದ ಹಾಗು ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್​ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ. ಇವರಿಗೆ ಸಾತ್ ನೀಡಲು ರಾಜ್ಯದ ಮುಖ್ಯಮಂತ್ರಿ  ಸಿದ್ದರಾಮಯ್ಯ,  ಉಪಮುಖ್ಯಮಂತ್ರಿ ಹಾಗು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ ಪರಮೇಶ್ವರ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹಾಗೂ ಸ್ಥಳೀಯ ಶಾಸಕರು ಮುಖಂಡರು ಭಾಗಿ‌ಯಾಗಲಿದ್ದಾರೆ.

ಇನ್ನು ಮೆರವಣಿಗೆಯಲ್ಲಿ  50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ ಇದ್ದು ಈ ಮೂಲಕ ಕಾಂಗ್ರೆಸ್​ ಶಕ್ತಿಪ್ರದರ್ಶನಕ್ಕೆ ಮುಂದಾಗಿದೆ. ಬಹಿರಂಗ ಸಭೆ ಮೂಲಕ ಮತ ಕಾಂಗ್ರೆಸ್​ ನಾಯಕರು ಭೇಟೆಗಿಳಿಯಲಿದ್ದಾರೆ.

ಡಿ.ಕೆ ಸುರೇಶ್​ ಟೆಂಪಲ್ ರನ್​ :

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್​ ಅವರು ಮಾ.28ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲ ಇಂದು ಕನಕಪುರ ತಾಲೂಕಿನ ದೇಗುಲ‌ ಮಠ, ಮರಳೇಗವಿ ಮಠಕ್ಕೆ ಭೇಟಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡ ಸುರೇಶ್ ಬಳಿಕ ಮನೆದೇವತೆ ಕೆಂಕೇರಮ್ಮ, ಕಬ್ಬಾಳಮ್ಮ‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ತಾಯಿಯಿಂದ ಆಶೀರ್ವಾದ :

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್​ ಅವರು ಮಾ.28ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ, ಈ ಹಿನ್ನೆಲೆ ಇಂದು ಕನಕಪುರ ತಾಲ್ಲೂಕಿನ ಕೋಡಿಹಳ್ಳಿಯಲ್ಲಿರೋ ತಮ್ಮ ನಿವಾಸದಲ್ಲಿ ನಾಮಪತ್ರ ಸಲ್ಲಿಕೆಗೂ ಮುನ್ನ ತಾಯಿ ಗೌರಮ್ಮರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES