Wednesday, May 15, 2024

ರಾಮೇಶ್ವರಂ ಸ್ಫೋಟ : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ NIA ದಾಳಿ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್​ಐಎ ಅಧಿಕಾರಿಗಳು ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಐದು ಕಡೆ ಸೇರಿದಂತೆ ಶಿವಮೊಗ್ಗ, ರಾಮನಗರ, ಬೀದರ, ಕಾರವಾರ ಹಾಗೂ ಚೆನ್ನೈನಲ್ಲಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ 5ಕ್ಕೂ ಹೆಚ್ಚು ಕಡೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿ ಸೇರಿದಂತೆ 5 ಕಡೆ ದಾಳಿ ಮಾಡಲಾಗಿದೆ. ಬೆಂಗಳೂರಿನಿಂದ 5ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿರುವ ಎನ್​ಐಎ ತಂಡದಲ್ಲಿ 15ಕ್ಕೂ ಹೆಚ್ಚು ಅಧಿಕಾರಿಗಳಿದ್ದಾರೆ.

ಕಾರವಾರದಲ್ಲಿ ಬೆಳ್ಳಂಬೆಳಗ್ಗೆ ಅಧಿಕಾರಿ ಮನೆಗೆ ಲೋಕಾಯುಕ್ತ ದಾಳಿ ನಡೆದಿದೆ. ಪ್ರಕಾಶ್ ಆರ್. ರೇವಣಕರ್ ಎಂಬವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಪ್ರಕಾಶ್ ಆರ್. ರೇವಣಕರ್ ನಗರಾಭಿವೃದ್ಧಿ ಪ್ರಾಧಿಕಾರದ ಎಇಇ ಆಗಿದ್ದಾರೆ. ಭ್ರಷ್ಟಾಚಾರದ ಆರೋಪದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ರಾಮನಗರದ ಪಿಡಿಒ ಮನೆ ಮೇಲೆ ದಾಳಿ

ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಚನ್ನಪಟ್ಟಣ ತಾಲ್ಲೂಕಿನ ಮೈಲನಾಯಕನಹಳ್ಳಿ ಗ್ರಾಪಂ ಪಿಡಿಒ ಶಿಬಾ ಮನೆ ಮೇಲೆ ದಾಳಿ ನಡೆದಿದೆ. ಇವರು ಕಳೆದ ಒಂದುವರೆ ತಿಂಗಳಿನಿಂದ ರಜೆಯಲ್ಲಿದ್ದರು. ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆ ಮೈಸೂರು ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಚನ್ನಪಟ್ಟಣದ ಮೈಸೂರು ಬ್ಯಾಂಕ್ ರಸ್ತೆಯಲ್ಲಿರುವ ಮನೆಯಲ್ಲಿ ನಾಲ್ಕು ಜನ ಅಧಿಕಾರಿಗಳ ತಂಡದಿಂದ ಶೋಧಕಾರ್ಯ ನಡೆದಿದೆ.

RELATED ARTICLES

Related Articles

TRENDING ARTICLES