Friday, May 10, 2024

ಮಂಡ್ಯ ಕಾಂಗ್ರೆಸ್ ಶಾಸಕ ರವಿ ಗಣಿಗ ಅರೆಸ್ಟ್

ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪದಲ್ಲೇ ಕಾಂಗ್ರೆಸ್​ಗೆ ದೊಡ್ಡ ಶಾಕ್ ಎದುರಾಗಿದೆ. ಮಂಡ್ಯ ಕಾಂಗ್ರೆಸ್​ ಶಾಸಕ ರವಿ ಗಣಿಗ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಅಶೋಕ್ ಖೇಣಿಗೆ ನಿಂದಿಸಿದ್ದ ಪ್ರಕರಣದಲ್ಲಿ ಅವರನ್ನು ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಬಳಿಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಳೆಯ ನೈಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಈ ಆದೇಶ ನೀಡಿದೆ.

ಜಾಮೀನು ರಹಿತ ವಾರೆಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಗಣಿಗ ರವಿಕುಮಾರ್ ಅವರು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಶಾಸಕ ರವಿ ಗಣಿಗ ಅವರನ್ನು 15 ದಿನ ಕಸ್ಟಡಿಗೆ ತೆಗೆದುಕೊಳ್ಳುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿದೆ. ಕೋರ್ಟ್ ಆದೇಶದಂತೆ ಶಾಸಕರನ್ನು ಪೊಲೀಸರು ಬಂಧಿಸಿದ್ದಾರೆ.

RELATED ARTICLES

Related Articles

TRENDING ARTICLES