Saturday, April 27, 2024

ನೀತಿ ಸಂಹಿತೆ ಉಲ್ಲಂಘನೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕೇಸ್​ ದಾಖಲು ಮಾಡಲಾಗಿದೆ.

ಬೆಳಗಾವಿಯ ಕುವೆಂಪು ನಗರದ ತಮ್ಮ ಗೃಹಕಚೇರಿಯಲ್ಲಿ ಮಾರ್ಚ್ 20 ರಂದು ಅಂಗನವಾಡಿ ಕಾರ್ಯಕರ್ತೆಯರ ಸಭೆ ನಡೆಸಿದ್ದರು.ಈ ವೇಳೆ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿ ದೂರು ದಾಖಲಿಸಿಕೊಂಡಿತ್ತು.

ವಿಶೇಷ ನ್ಯಾಯಾಲಯದಿಂದ ಐಪಿಸಿ ಕಲಂ188ರಡಿ ಸಮನ್ಸ್ ಜಾರಿ

ಸಭೆಗೆ ಅನುಮತಿ ಪಡೆಯದೇ ನೂರಾರು ಕಾರ್ಯಕರ್ತೆಯರನ್ನು ಸೇರಿಸಿ ಅಧಿಕಾರ ದುರಪಯೋಗ ಮಾಡಿಕೊಂಡಿದ್ದ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಚುನಾವಷಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಕೋರ್ಟ್ ನಿಂದ ಸಮನ್ಸ್ ಜಾರಿ ಏಪ್ರಿಲ್ 30ರೊಳಗೆ ಉತ್ತರಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಗಡುವು ನೀಡಿದ ನ್ಯಾಯಾಲಯ

ಫ್ಲೈಯಿಂಗ್ ಸ್ಕ್ವಾಡ್ ತಂಡದ ಮುಖ್ಯಸ್ಥ ಮಹಾಂತೇಶ ಅವರು ಪ್ರಕರಣ ದಾಖಲಿಸುವ ಸಲುವಾಗಿ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ದೂರನ್ನು ನ್ಯಾಯಾಲಯ ಪುರಸ್ಕರಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಅವರ ಗೃಹ ಕಚೇರಿ ಇರುವ ನಿವೇಶನದ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗಿದೆ.

RELATED ARTICLES

Related Articles

TRENDING ARTICLES