Sunday, May 12, 2024

ರಾಜ್ಯದ ಈ ಜಿಲ್ಲೆಗಳಲ್ಲಿ 5 ದಿನ ಗುಡುಗು ಸಹಿತ ಮಳೆ, ಬೆಂಗಳೂರಿಗರೇ ಹುಷಾರ್!

ಬೆಂಗಳೂರು : ಮಳೆಗಾಗಿ ಕಾಯುತ್ತಿದ್ದವರಿಗೆ ಗುಡ್‌ನ್ಯೂಸ್‌! ರಾಜ್ಯದ ಬಹುತೇಕ ಕಡೆ ಬಿಸಿಲಿನ ಝಳ ಹೆಚ್ಚಾಗಿದ್ದು, ಈ ಮಧ್ಯೆ ಇಂದಿನಿಂದ (ಮಾರ್ಚ್​ 28) 5 ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ತಾಜಾ ಪಾಶ್ಚಿಮಾತ್ಯ ಅಡಚಣೆಯು ಪರಿಣಾಮ ಬೀರುವ ಸಾಧ್ಯತೆಯಿದೆ. ಇದರಿಂದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುಡ್ಡಗಾಡು ರಾಜ್ಯಗಳ ಕೆಲವು ಪ್ರದೇಶಗಳಲ್ಲಿ ಬಲವಾದ ಗುಡುಗು ಸಹಿತ ಮಳೆಯಾಗಲಿದೆ. ತಗ್ಗು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಪರಿಣಾಮ ಮುಂದಿನ 5 ದಿನ (ಮಾರ್ಚ್ 28 ರಿಂದ ಏಪ್ರಿಲ್ 1) ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಸಾಧಾರಣದಿಂದ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಸೆಕೆ ಇನ್ನಷ್ಟು ಹೆಚ್ಚಳ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ ಮತ್ತು ದಾವಣಗೆರೆಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಮಾತ್ರ ಸೆಕೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಮಾರ್ಚ್ 31ರಿಂದ ಬೆಂಗಳೂರು ಸೇರಿ ರಾಜ್ಯದಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಬಾಗಲಕೋಟೆ, ಬೀದರ್ ನಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ 35.6 ಡಿಗ್ರಿ ಗರಿಷ್ಠ ಉಷ್ಣಾಂಶ

ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

RELATED ARTICLES

Related Articles

TRENDING ARTICLES