Saturday, April 27, 2024

ಲೋಕಸಮರ: ಹಾಸನದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರಜ್ವಲ್ ರೇವಣ್ಣ

ಹಾಸನ : ಹಾಸನ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಜೆಡಿಎಸ್​ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಇಂದು ಹಾಸನ ಜಿಲ್ಲಾಧಿಕಾರಿಗಳಾದ ಸತ್ಯಭಾಮಗೆ ಸಾಂಕೇತಿಕವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು.

ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಶಾಸಕರುಗಳಾದ ಸಿ.ಎನ್.ಬಾಲಕೃಷ್ಣ, ಸ್ವರೂಪ್ ಪ್ರಕಾಶ್ ಉಪಸ್ಥಿತಿಯಲ್ಲಿ ಪ್ರಜ್ವಲ್ ರೇವಣ್ಣ ತಮ್ಮ ನಾಮಪತ್ರವನ್ನು ಸಾಂಕೇತಿಕವಾಗಿ ಸಲ್ಲಿಸಿದ್ದಾರೆ. ಏಪ್ರಿಲ್ 4 ರಂದು ಕಾರ್ಯಕರ್ತರೊಂದಿಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಕೋಲಾರ ಲೋಕಸಭಾ ಕ್ಷೇತ್ರ: ಚಿಕ್ಕಪೆದ್ದಣ್ಣ ಗೆ ಕುಮಾರಸ್ವಾಮಿ ಗಾಳ!

ಇನ್ನು ನಾಮಪತ್ರ ಸಲ್ಲಿಕೆಗೂ ಮುನ್ನ ತಮ್ಮ ತಾತ ಹಾಗು ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಅವರ ಹುಟ್ಟೂರು ಹರದನಹಳ್ಳಿಯಲ್ಲಿ ದೇವೇಗೌಡರನ್ನು ಭೇಟಿ ಮಾಡಿ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು, ಬಳಿಕ ನಾಮಪತ್ರಕ್ಕೆ ಸೂಚಕರಾಗಿ ದೇವೇಗೌಡ ಅವರು ಸಹಿ ಮಾಡಿದರು.

ಇನ್ನು ಮಗನ ನಾಮಪತ್ರ ಸಲ್ಲಿಕೆಗೆಂದು ಜಿಲ್ಲಾಧಿಕಾರಿಗಳ ಕಚೇರಿ ಕಡೆಗೆ ಬಂದ ರೇವಣ್ಣ ಚಪ್ಪಲಿ ಇಲ್ಲದೇ ಬರಿಗಾಲಿನಲ್ಲಿ ತೆರಳಿ ಮಗನ ನಾಮಪತ್ರ ಸಲ್ಲಿಕೆಗೆ ಸಾತ್​ ನೀಡಿದ್ದಾರೆ.

ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮೊದಲ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು ಅಭ್ಯರ್ಥಿಗಳು ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

RELATED ARTICLES

Related Articles

TRENDING ARTICLES