Thursday, May 2, 2024

Congress Candidates List: ಕರ್ನಾಟಕದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಕೋಲಾರ ಮಾತ್ರ ಇನ್ನೂ ಪೆಂಡಿಂಗ್

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಬಾಕಿ ಉಳಿದಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಕೋಲಾರ ಕ್ಷೇತ್ರದ ಟಿಕೆಟ್ ಕಾಯ್ದಿರಿಸಿದೆ.

ಬಳ್ಳಾರಿ ಲೋಕಸಭಾ ಟಿಕೆಟ್ ಇ ತುಕರಾಂ, ಚಿಕ್ಕಬಳ್ಳಾಪುರ ಕ್ಷೇತ್ರದಿಂದ ರಕ್ಷಾರಾಮಯ್ಯ,ಚಾಮರಾಜನಗರ ಕ್ಷೇತ್ರದ ಟಿಕೆಟ್​ ಸಚಿವ ಎಚ್​ಸಿ ಮಹಾದೇವಪ್ಪ ಪುತ್ರ ಸುನೀಲ್ ಬೋಸ್​ಗೆ ನೀಡಲಾಗಿದೆ. ಇದರೊಂದಿಗೆ ಕಾಂಗ್ರೆಸ್ ಒಟ್ಟು 28 ಕ್ಷೇತ್ರಗಳಲ್ಲಿ 27 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು, ಕೋಲಾರ ಒಂದು ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿದೆ.

ಬಳ್ಳಾರಿ ಲೋಕಸಭಾ ಟಿಕೆಟ್ ಸಂಡೂರು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ತುಕರಾಂ ಅವರಿಗೆ ನೀಡಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಸಿದ್ದರಾಮಯ್ಯನವರ ಆಪ್ತ ಸಚಿವ ಡಾ.ಹೆಚ್​ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್​ಗೆ ಮಣೆ ಹಾಕಲಾಗಿದೆ. ಇದರೊಂದಿಗೆ ಕಾಂಗ್ರೆಸ್ 27 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ.

RELATED ARTICLES

Related Articles

TRENDING ARTICLES