Saturday, April 27, 2024

ಡಾ.ಸಿ.ಎನ್. ಮಂಜುನಾಥ್ ವಿರುದ್ಧ ಡಾ.ಸಿ.ಎನ್. ಮಂಜುನಾಥ್ ಹೆಸರಿನ ಮತ್ತೊಬ್ಬ ಅಭ್ಯರ್ಥಿ ಸ್ಪರ್ಧೆ

ಹಾಸನ : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ವಿರುದ್ಧ ಡಾ.ಸಿ.ಎನ್. ಮಂಜುನಾಥ್ ಹೆಸರಿನ ಮತ್ತೊಬ್ಬ ಅಭ್ಯರ್ಥಿ ಸ್ಪರ್ಧೆ ಮಾಡುತ್ತಿದ್ದಾರೆ.

ಖ್ಯಾತ ವೈದ್ಯ, ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಚೊಳೇನಹಳ್ಳಿ ಗ್ರಾಮದ ಡಾ.ಸಿ.ಎನ್. ಮಂಜುನಾಥ್ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಇದೀಗ ಅವರ ತಾಲ್ಲೂಕಿನವರೇ ಅದೇ ಕ್ಷೇತ್ರಕ್ಕೆ ಅದೇ ಹೆಸರಿನ ಮತ್ತೊಬ್ಬ ಡಾ.ಸಿ.ಎನ್. ಮಂಜುನಾಥ್ ಎಂಬವವರು ಚುನಾವಣಾ‌ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಡಾ. ಸಿ.ಎನ್.ಮಂಜುನಾಥ್ ಅವರಿಗೆ ಸ್ಪರ್ಧೆ ಒಡ್ಡಲು ಅದೇ ಹೆಸರಿನ ಗೌರವ ಡಾಕ್ಟರೇಟ್ ಮೂಲಕ ಹೆಸರಿನ ಮುಂದೆ ಡಾಕ್ಟರ್ ಹೊಂದಿರುವ ಡಾ.ಸಿ.ಎನ್.ಮಂಜುನಾಥ್ ಎಂಬುವವರು ಬಹುಜನ ಭಾರತ್ ಪಾರ್ಟಿಯಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಡಿಕೆಸು 593 ಕೋಟಿ ಒಡೆಯ, 150 ಕೋಟಿ ‘ಸಾಲಗಾರ’, ಇವ್ರ ಬಳಿ ‘ಕಾರು’ ಇಲ್ವಂತೆ : ಇಲ್ಲಿದೆ ಆಸ್ತಿ ವಿವರ

ಒಂದೇ ಜಿಲ್ಲೆ, ಒಂದೇ ತಾಲ್ಲೂಕಿನವರು

ಕುತೂಹಲ ಸಂಗತಿಯೆಂದರೆ ಒಂದೇ ಹೆಸರು ಹೊಂದಿರುವ ಇಬ್ಬರ ತಂದೆಯ ಹೆಸರೂ ಒಂದೇ ಆಗಿದ್ದು, ಒಂದೇ ಜಿಲ್ಲೆ, ಒಂದೇ ತಾಲ್ಲೂಕಿನವರಾಗಿದ್ದಾರೆ. ಇಬ್ಬರಲ್ಲಿ ಒಬ್ಬರು ವೃತ್ತಿಯಿಂದ ವೈದ್ಯರು. ಮತ್ತೊಬ್ಬರು ಸಮಾಜ ಸೇವೆಗೆ ಗೌರವ ಡಾಕ್ಟರೇಟ್ ಪಡೆದಿರುವವರು ಎಂಬುದಷ್ಟೇ‌ ವ್ಯತ್ಯಾಸವಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ದಲಿತ ಮತಗಳೇ ನಿರ್ಣಾಯಕವಾಗಿವೆ. ಏಪ್ರಿಲ್ 2 ರಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಡಾ. ಸಿ.ಎನ್.ಮಂಜುನಾಥ್ ಹೇಳಿದ್ದಾರೆ.

RELATED ARTICLES

Related Articles

TRENDING ARTICLES