Monday, May 20, 2024

ಮೋದಿ ಬಿಟ್ರೆ ದೇಶಕ್ಕೆ ಇನ್ಯಾರೂ ನಾಯಕರಿಲ್ಲ : ಮೋದಿ ಹೊಗಳಿದ ದೇವೇಗೌಡ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಟ್ಟರೆ ದೇಶಕ್ಕೆ ಇನ್ಯಾರೂ ನಾಯಕರಿಲ್ಲ ಎಂದು ಮೋದಿ ನಾಯಕತ್ವವನ್ನು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಹೊಗಳಿದರು.

ಬೆಂಗಳೂರಿನಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಜಂಟಿ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಹಲವು ಕ್ಷೇತ್ರಗಳಲ್ಲಿ ನಮ್ಮ ಪರ ವಾತಾವರಣ ಇದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಹಾಗೂ ಜೆಡಿಎಸ್ ಗೆಲ್ಲಬೇಕು ಎಂದು ಹೇಳಿದರು.

ಯಡಿಯೂರಪ್ಪ ಅವರ ಪಾತ್ರ ಬಹಳ ಮುಖ್ಯವಾಗಿದೆ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಏನಾಗ್ತಿದೆ, ತುಂಬಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪರ ಇದೆ. ಕೇವಲ ಪ್ರಧಾನಿ ಮೋದಿ ಹೆಸರು ಸಾಕಾಗೊಲ್ಲಾ. ಕಾರ್ಯಕರ್ತರು ಕೆಲಸ ಮಾಡಬೇಕಿದೆ. ಮೋದಿ ಹಾಗೂ ಅಮಿತ್ ಶಾ ಇಬ್ಬರೇ ರಾಷ್ಟ್ರದ ಸಮಸ್ಯೆಗಳನ್ನು ಪರಿಹಾರ ಮಾಡ್ತಿದ್ದಾರೆ ಎಂದು ಅಮಿತ್​ ಶಾರನ್ನೂ ಹೊಗಳಿದರು.

ಟೈಮ್ ಕಡಿಮೆ ಇದೆ, ಕೆಲಸ ಮಾಡಿ ಎಲ್ಲಾ ಕ್ಷೇತ್ರ ಗೆಲ್ಲಿಸಿ

ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನುರಿತ ಹಿರಿಯ ಮುಖಂಡರಗಿಂತ ಹೆಚ್ಚು ಎಲ್ಲಾ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಮಾಜಿ‌ ಸಿಎಂ ಹಾಗೂ ಮಂಡ್ಯ ಅಭ್ಯರ್ಥಿ ಹೆಚ್​.ಡಿ ಕುಮಾರಸ್ವಾಮಿ ಮಾತಾಡಿದ್ರು. ಸಮಯ ಕಡಿಮೆ ಇದೆ, ಕೆಲಸ ಮಾಡಿ ಎಲ್ಲಾ ಕ್ಷೇತ್ರ ಗೆಲ್ಲಿಸಿ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಭೂಮಿ ಬೆಲೆ ಎಷ್ಟಿತ್ತು? ಈಗ ಎಷ್ಟಿದೆ?

ನೀವೆಲ್ಲರೂ ಹಳೆಯದನ್ನೆಲ್ಲಾ ಮರೆಯಿರಿ. ಕಳೆದ 60 ವರ್ಷದ ಹಿಂದೆ ಬೆಂಗಳೂರಿನಲ್ಲಿ ಭೂಮಿ ಬೆಲೆ ಎಷ್ಟಿತ್ತು? ಈಗ ಎಷ್ಟಿದೆ? ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಎಲ್ಲಾ ಕ್ಷೇತ್ರಗಳ ಮಾಹಿತಿ ಪಡೆದಿದ್ದಾರೆ. ಎಲ್ಲಾ ಮಾಹಿತಿಯನ್ನ ಬಿಜೆಪಿ ವರಿಷ್ಠರಿಗೆ ನೀಡ್ತಿದ್ದಾರೆ. ಎರಡು ಪಕ್ಷದಲ್ಲಿ ಸಮನ್ವಯ ಸಾಧಿಸಬೇಕು ಎಂದು ದೇವೇಗೌಡ ಕರೆ ನೀಡಿದರು.

RELATED ARTICLES

Related Articles

TRENDING ARTICLES