Tuesday, September 17, 2024

ಹುಷಾರ್..! ರಾಜ್ಯದಲ್ಲಿ 5 ದಿನ ತಾಪಮಾನ ಹೆಚ್ಚಳ, ಮುಂದಿನ ತಿಂಗಳು ಮಳೆ

ಬೆಂಗಳೂರು : ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಉಷ್ಣ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಏಪ್ರಿಲ್ 1 ರಿಂದ ಮಳೆಯಾಗುವ ನಿರೀಕ್ಷೆ ಇದೆ. ಈ ತಿಂಗಳಲ್ಲಿ ಕೆಲವೆಡೆ ಮಾತ್ರ ಮಳೆಯಾಗಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ತಾಪಮಾನ ಇನ್ನಷ್ಟು ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಉಷ್ಣ ಅಲೆ ಹಿನ್ನೆಲೆ ಜನರು ಹಗಲು ಹೊತ್ತಿನಲ್ಲಿ ಸಾಧ್ಯವಾದಷ್ಟು ಮನೆಯೊಳಗೆ ಇರುವಂತೆ ಎಚ್ಚರಿಕೆ ನೀಡಿದೆ. ನೀರು ಹಾಗೂ ದ್ರವ ರೂಪದ ಆಹಾರ ಸೇವನೆಗೆ ಆದ್ಯತೆ ನೀಡುವಂತೆ ಸೂಚಿಸಿದೆ.

ಕಲಬುರಗಿ, ಯಾದಗಿರಿ ಮತ್ತು ಬಳ್ಳಾರಿಯಂತಹ ಉತ್ತರ ಕರ್ನಾಟಕದ ಜಿಲ್ಲೆಗಳು ಮುಂದಿನ ಮೂರು ದಿನಗಳಲ್ಲಿ ಬಿಸಿಗಾಳಿ ಎದುರಿಸಲಿದೆ. IMD ಮುಂದಿನ ಮೂರು ದಿನಗಳಲ್ಲಿ ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಹೀಟ್‍ವೇವ್ ಅಲರ್ಟ್ ಅನ್ನು ಎಚ್ಚರಿಸಿದೆ.

ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್‍

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್‍ನಷ್ಟಿದ್ದರೆ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‍ನಷ್ಟು ಹೆಚ್ಚಳವಾಗಿದೆ. ಬುಧವಾರ 40 ಡಿಗ್ರಿ ಸೆಲ್ಸಿಯಸ್ ಗಡಿಯನ್ನು ಮೀರಿದ್ದು, ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕ್ರಮವಾಗಿ 40.6 ಮತ್ತು 40.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

RELATED ARTICLES

Related Articles

TRENDING ARTICLES