Saturday, April 27, 2024

ರಾಮೇಶ್ವರಂ ಕೆಫೆ ಸ್ಪೋಟ: ಆರೋಪಿಗಳ ಫೋಟೋ ಬಿಡುಗಡೆ, ಸುಳಿವು ನೀಡಿದರೇ 10 ಲಕ್ಷ ಬಹುಮಾನ!

ಬೆಂಗಳೂರು : ಕುಂದ್ಲಹಳ್ಳಿ ಬಳಿಯ ಬ್ರೂಕ್​ ಫೀಲ್ಡ್​ನ ಐಟಿಪಿಎಲ್​ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್ ಹುಸೈನ್ ಶಾಜೀಬ್ ಹಾಗೂ ಉಗ್ರ ಅಬ್ದುಲ್ ಮತೀನ್ ಅಹ್ಮದ್ ತಾಹನ ಫೋಟೋ ಬಿಡುಗಡೆ ಮಾಡಿರುವ ಎನ್ಐಎ ಇವರ ಸುಳಿವು ನೀಡುವವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ವನಾಶವಾಗಲಿದೆ : ಬಿ.ಎಸ್​ ಯಡಿಯೂರಪ್ಪ

ಬಾಂಬ್​ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್​ ಶರೀಫ್ ಎಂಬಾತನನ್ನು ನಿನ್ನೆ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತಿಬ್ಬರ ಪ್ರಮುಖ ಆರೋಪಗಳ ಪತ್ತೆಗೆ ಬಲೆ ಬೀಸಿದೆ. ‘ಬಾಂಬರ್’ ಮುಸಾವೀರ್ ಹುಸೇನ್ ಶಾಜಿಬ್ ಹಾಗೂ ಉಗ್ರ ಅಬ್ದುಲ್ ಮತೀನ್ ಅಹ್ಮದ್ ತಾಹಾನ ಫೋಟೋವನ್ನು ಬಿಡುಗಡೆ ಮಾಡಲಾಗಿದ್ದು, ಈ ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್​ಐಎ ಘೋಷಣೆ ಮಾಡಿದೆ.

ಬೆಂಗಳೂರಿನ ಬ್ರೂಕ್‌ಫೀಲ್ಡ್‌ನ ಐಟಿಪಿಎಲ್ ರಸ್ತೆಯಲ್ಲಿರುವ ಜನನಿಬಿಡ ಜನಪ್ರಿಯ ರೆಸ್ಟೋರೆಂಟ್‌ನಲ್ಲಿ ಮಾರ್ಚ್ 1ರಂದು ಹ್ಯಾಂಡ್‌ಬ್ಯಾಗ್‌ನಲ್ಲಿ ಬಚ್ಚಿಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ ಸ್ಫೋಟಗೊಂಡ ನಂತರ ನೌಕರರು ಮತ್ತು ಗ್ರಾಹಕರು ಸೇರಿದಂತೆ ಒಂಬತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಫೋಟದಿಂದ ಆಸ್ತಿಪಾಸ್ತಿಗೂ ಹಾನಿಯಾಗಿತ್ತು.

RELATED ARTICLES

Related Articles

TRENDING ARTICLES