Sunday, April 28, 2024

ಇಂದು RCB-KKR ಕಾಳಗ : ಚಿನ್ನಸ್ವಾಮಿಯಲ್ಲಿ ರನ್ ಮಳೆ ಹರಿಯುವ ಸಾಧ್ಯತೆ

ಬೆಂಗಳೂರು : ಐಪಿಎಲ್​ನ 10ನೇ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿವೆ.

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಇದು ಆರ್‌ಸಿಬಿಯ ಮೂರನೇ ಪಂದ್ಯವಾಗಿದ್ದು, ಕೆಕೆಆರ್ ತನ್ನ ಎರಡನೇ ಪಂದ್ಯವನ್ನು ಆಡಲಿದೆ.

ಕಳೆದ ಪಂದ್ಯದಲ್ಲಿ ಆರ್‌ಸಿಬಿ ಪಂಜಾಬ್ ಕಿಂಗ್ಸ್ ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಗೆಲುವಿನ ಲಯಕ್ಕೆ ಮರಳಿದೆ. ಇತ್ತ, ಕೆಕೆಆರ್ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 4 ರನ್‌ಗಳಿಂದ ಸೋಲಿಸಿದೆ.

RCB ಆಡಿರುವ ಎರಡು ಪಂದ್ಯಗಳಿಂದ 2 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಕೋಲ್ಕತ್ತಾ ಒಂದು ಪಂದ್ಯ ಗೆದ್ದು 2 ಅಂಕಗಳೊಂದಿಗೆ (ರನ್​ ರೇಟ್ ಆಧಾರದಲ್ಲಿ) 4ನೇ ಸ್ಥಾನದಲ್ಲಿದೆ. ಅಂಕಪಟ್ಟಿಯಲ್ಲಿ ಮೇಲೇಳಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕಿದೆ.

RCB vs KKR ಬಲಾಬಲ

ಈವರೆಗೆ RCB 14 ಹಾಗೂ 18 ಪಂದ್ಯಗಳಲ್ಲಿ KKR ಗೆಲುವು ದಾಖಲಿಸಿದೆ. ನೈಟ್ ರೈಡರ್ಸ್ ಕಳೆದ ಆವೃತ್ತಿಯಲ್ಲಿ RCB ಮೇಲೆ ಎರಡೂ ಪಂದ್ಯ ಗೆದ್ದಿದೆ. ಆ ಪಂದ್ಯದಲ್ಲಿ 200ಕ್ಕೂ ಹೆಚ್ಚು ರನ್ ಗಳಿಸಿದೆ. RCB 2015 ರಿಂದ KKR ಅನ್ನು ಅವರ ತವರು ಮೈದಾನದಲ್ಲಿ ಸೋಲಿಸಿಲ್ಲ.

ರನ್ ಮಳೆ ಹರಿಯುವ ಸಾಧ್ಯತೆ

ಆರ್​ಸಿಬಿ ಹಾಗೂ ಕೆಕೆಆರ್ ಎರಡೂ ತಂಡದಲ್ಲಿ ಬಿಗ್ ಹಿಟ್ಟರ್​ಗಳಿದ್ದಾರೆ. ಇತ್ತ, ಚಿನ್ನಸ್ವಾಮಿ ಮಯದಾನ ಚಿಕ್ಕದಾಗಿದ್ದು ರನ್ ಮಳೆ ಹರಿಯುವ ಸಾಧ್ಯತೆಯಿದೆ. ನಿನ್ನೆಯ (ರಾಜಸ್ಥಾನ vs ಡೆಲ್ಲಿ) ಪಂದ್ಯ ಸೇರಿದಂತೆ ಈವರೆಗೆ ಅತಿಥೇಯ ತಂಡಗಳು ಗೆದ್ದಿವೆ. RCB ಆ ಟ್ರೆಂಡ್ ಮುಂದುವರಿಸುತ್ತಾ? ಅಥವಾ ಅಯ್ಯರ ಪಡೆಗೆ ಶರಣಾಗುತ್ತಾ? ಎಂಬುದು ಕುತೂಹಲ ಮೂಡಿಸಿದೆ.

RCB ಪ್ಲಸ್ ಪಾಯಿಂಟ್

ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್​ಗೆ ಮರಳಿರುವುದು. ನಾಯಕ ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್, ಕ್ಯಾಮರೂನ್ ಗ್ರೀನ್, ರಜತ್ ಪಾಟಿದಾರ್ ಬ್ಯಾಟಿಂಗ್ ಬಲ.

ಕೆಕೆಆರ್ ಪ್ಲಸ್ ಪಾಯಿಂಟ್

ಆಂಡ್ರೆ ರಸೆಲ್ ಹಾಗೂ ರಿಂಕು ಸಿಂಗ್ ಸ್ಫೋಟಕ ಆಟ. ನಾಯಕ ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್ ಬ್ಯಾಟಿಂಗ್ ಬಲ. ಸುನಿಲ್ ನರೈನ್, ಮಿಚೆಲ್ ಸ್ಟಾರ್ಕ್ ಮಾರಕ ಬೌಲಿಂಗ್

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಾಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್‌ಕುಮಾರ್ ವೈಶಾಕ್ , ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ಕೋಲ್ಕತ್ತಾ ನೈಟ್ ರೈಡರ್ಸ್

ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ರಮಣದೀಪ್ ಸಿಂಗ್, ರಿಂಕು ಸಿಂಗ್, ಶಕೀಬ್ ಅಲ್ ಹಸನ್, ಅನುಕುಲ್ ರಾಯ್, ವೆಂಕಟೇಶ್ ಅಯ್ಯರ್, ಶೆರ್ಫೇನ್ ರುದರ್‌ಫೋರ್ಡ್, ಅಂಗ್‌ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ಸುನಿಲ್ ನರೈನ್, ಕೆ.ಎಸ್ ಭರತ್, ಫಿಲ್ ಸಾಲ್ಟ್, ರಹಮಾನುಲ್ಲಾ ಗುರ್ಬಾಜ್, ವೈಭವ್ ಅರೋರಾ, ಚೇತನ್ ಸಕರಿಯಾ, ಮಿಚೆಲ್ ಸ್ಟಾರ್ಕ್, ಮುಜೀಬ್ ಉರ್ ರೆಹಮಾನ್, ಹರ್ಷಿತ್ ರಾಣಾ.

RELATED ARTICLES

Related Articles

TRENDING ARTICLES