Friday, May 17, 2024

ಇಂದು ಪ್ರಥಮ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಪ್ರಥಮ ಪಿಯುಸಿ ಫಲಿತಾಂಶ ಇಂದು (ಮಾರ್ಚ್ 30) ಬೆಳಗ್ಗೆ 11 ಗಂಟೆಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನಾ ಮಂಡಳಿ ಪ್ರಕಟಿಸಲಿದೆ. ಪ್ರಥಮ ಪಿಯುಸಿ ಪರೀಕ್ಷೆ ಬರೆದವರು ತಮ್ಮ ಫಲಿತಾಂಶವನ್ನು karresults.nic.in ಎಂಬ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು.

ಪ್ರಥಮ ಪಿಯುಸಿ ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬೇಕಾದರೆ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಬೇಕಾಗುತ್ತದೆ. ಕರ್ನಾಟಕ ಪ್ರಥಮ ಪಿಯು ಪರೀಕ್ಷೆಯು ಫೆಬ್ರವರಿ 12 ಮತ್ತು ಫೆಬ್ರವರಿ 27 ರ ವರೆಗೆ ನಡೆಯಿತು. ಪ್ರಥಮ ಪಿಯುಸಿಯ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಏಕಕಾಲಕ್ಕೆ ಪರೀಕ್ಷೆಗಳನ್ನು ಎದುರಿಸಿದ್ದರು. ಈ ಪರೀಕ್ಷೆಗಳ ಉತ್ತರ ಪತ್ರಿಕೆ ಮೌಲ್ಯಮಾಪನವೂ ಮುಗಿದಿದ್ದು, ಫಲಿತಾಂಶ ಇಂದು ಪ್ರಕಟವಾಗುತ್ತಿದೆ.

ಇದನ್ನೂ ಓದಿ: KPSC ಕಚೇರಿಯಿಂದ ಆಯ್ಕೆ ಪಟ್ಟಿ ನಾಪತ್ತೆ: ದೂರು ದಾಖಲು

ಮೊಬೈಲ್‌ ಮೂಲಕ ಇಲ್ಲವೇ ಇಂಟರ್‌ನೆಟ್‌ ಸೆಂಟರ್‌, ಸೈಬರ್ ಕೆಫೆ ಇಲ್ಲವೇ ಮನೆಯಲ್ಲಿಯೇ ಕುಳಿತು ಆನ್‌ಲೈನ್‌ ಮೂಲಕ ಪ್ರಥಮ ಪಿಯು ಪರೀಕ್ಷೆಯ ಫಲಿತಾಂಶವನ್ನು ವೀಕ್ಷಿಸಲು ಅವಕಾಶವಿದೆ. ಇಂದು ಕಾಲೇಜುಗಳಲ್ಲೂ ಫಲಿತಾಂಶವನ್ನು ಪ್ರಕಟವಾಗುತ್ತದೆ. ಆದ್ದರಿಂದ ಕಾಲೇಜುಗಳಲ್ಲಿಯೂ ಫಲಿತಾಂಶಗಳನ್ನು ವಿದ್ಯಾರ್ಥಿಗಳು ವೀಕ್ಷಿಸಬಹುದು ಒಮ್ಮೆ ಫಲಿತಾಂಶ ಬಿಡುಗಡೆಯಾದ ನಂತರ, ಈ ಹಂತಗಳನ್ನು ಅನುಸರಿಸುವ ಮೂಲಕ ಅಭ್ಯರ್ಥಿಗಳು ಅದನ್ನು ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ.

ಕರ್ನಾಟಕ ಪ್ರಥಮ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ ಬಿಡುಗಡೆ ಮಾಡಿದೆ. ಮಾರ್ಚ್ 25ರಂದು ಈ ಪಟ್ಟಿ ಬಿಡುಗಡೆಯಾಗಿದ್ದು, 11 ನೇ ತರಗತಿಗೆ ಪೂರಕ ಪರೀಕ್ಷೆಗಳನ್ನು ಮೇ 20 ರಿಂದ ಮೇ 31, 2024 ರವರೆಗೆ ನಡೆಯಲಿದೆ. ಪ್ರಥಮ ಪಿಯುಸಿ (1st PUC) ಪರೀಕ್ಷೆಯಲ್ಲಿ ತೇರ್ಗಡೆಯಾಗದ ಅಭ್ಯರ್ಥಿಗಳು ಮಾತ್ರ ಪೂರಕ ಪರೀಕ್ಷೆಗಳಿಗೆ ಹಾಜರಾಗಬಹುದು. ಹೆಚ್ಚಿನ ವಿವರಗಳಿಗಾಗಿ, ಕೆಎಸ್‌ಇಎಬಿಯ ಅಧಿಕೃತ ವೆಬ್‌ಸೈಟ್‌ ಗಮನಿಸಬಹುದು.

RELATED ARTICLES

Related Articles

TRENDING ARTICLES