Saturday, May 4, 2024

ಬಿಲ್ಡರ್​ಗಳ ಮನೆ, ಕಚೇರಿ ಮೇಲೆ ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ

ಬೆಂಗಳೂರು : ಬೆಂಗಳೂರಿನಲ್ಲಿ ಬೆಳಗ್ಗೆ ಬೆಳಗ್ಗೆಯೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಲ್ಡರ್‌ಗಳಿಗೆ ಶಾಕ್‌ ನೀಡಿದ್ದಾರೆ. ಸುಮಾರು 20ಕ್ಕೂ ಅಧಿಕ ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.

ಕೆ.ಆರ್. ಪುರಂ ಸಮೀಪದ ಕೊಡಿಗೇಹಳ್ಳಿಯ ನಂಜುಂಡೇಶ್ವರ ಇನ್‌ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್‌ ಸೇರಿ ಹಲವು ಪ್ರಮುಖ ಬಿಲ್ಡರ್‌ಗಳು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಕಡತಗಳ ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಣ ವಶಪಡಿಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: ಇಂದು ಪ್ರಥಮ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ

ತೆರಿಗೆ ವಂಚನೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಿಗೆ ಹಾಗೂ ರಾಜಕೀಯ ನಾಯಕರಿಗೆ ಫಂಡಿಂಗ್‌ ಮಾಡುತ್ತಿರುವ ಕುರಿತು ಐಟಿ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅಕ್ರಮವಾಗಿ ಹಣದ ಸಾಗಣೆ ಕುರಿತು ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.

RELATED ARTICLES

Related Articles

TRENDING ARTICLES