Friday, June 14, 2024

KPSC ಕಚೇರಿಯಿಂದ ಆಯ್ಕೆ ಪಟ್ಟಿ ನಾಪತ್ತೆ: ದೂರು ದಾಖಲು

ಬೆಂಗಳೂರು: ವಿವಾದಗಳಿಂದಲೇ ಸುದ್ದಿಯಲ್ಲಿರುವ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೊಂದು ಅಚ್ಚರಿ ನಡೆದಿದ್ದು, ಈ ಬಾರಿ ಜೂನಿಯ‌ರ್ ಎಂಜಿನಿಯರ್ ಹುದೆಗಳ ನೇಮಕಾತಿಯ ಆಯ್ಕೆಪಟ್ಟಿಯೇ ನಾಪತ್ತೆಯಾಗಿದೆ!

ಇಡೀ ಕಚೇರಿ ತಡಕಾಡಿದರೂ ಆಯ್ಕೆಪಟ್ಟಿ ಕಡತ ಪತ್ತೆಯಾಗದ ಹಿನ್ನೆಲೆಯಲ್ಲಿ ವಿಧಾನಸೌಧ ಪೊಲೀಸ್ ಠಾಣೆಗೆ ಕೆಪಿಎಸ್‌ಸಿ ಅಧಿಕಾರಿ ದೂರು ನೀಡಿದ್ದಾರೆ. ಅದರನ್ವಯ FIR ದಾಖಲಾಗಿದೆ. ಕಡತವು ಆಕಸ್ಮಿಕವಾಗಿ ಕೆಪಿಎಸ್‌ಸಿಯ ಬೇರೆ ಶಾಖೆಗಳಿಗೆ ಹೋಗಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ಜ್ಞಾಪನದ ಮೂಲಕ ಅಧಿಕಾರಿ, ಸಿಬ್ಬಂದಿಗೆ ಸೂಚನೆ ನೀಡಲಾಗಿತ್ತು.

ಇದನ್ನೂ ಓದಿ: ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್​ ಯಾರೆಲ್ಲಾ ಇದ್ದಾರೆ? ಇಲ್ಲಿದೆ ಮಾಹಿತಿ

ಶಾಖೆಗಳಲ್ಲಿ ಪರಿಶೀಲನೆ ನಡೆಸಲಾಗಿದ್ದು, ಕಡತ ಪತ್ತೆಯಾಗಿಲ್ಲ ಎಂಬ ಉತ್ತರ ಎಲ್ಲಾ ಶಾಖೆಗಳಿಂದ ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಿ ಎಲ್ಲಾ ಶಾಖೆಗಳಿಗೆ ಖುದ್ದಾಗಿ ತೆರಳಿ ಕಡತಕ್ಕಾಗಿ ಹುಡುಕಾಟ ನಡೆಸಲಾಗಿದೆ. ಆಗಲೂ ಕಡತ ಸಿಕ್ಕಿಲ್ಲ. ಹೀಗಾಗಿ, ಸಂಬಂಧಿಸಿದ ಅಧಿಕಾರಿ ಮತ್ತು ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗಿದೆ.

RELATED ARTICLES

Related Articles

TRENDING ARTICLES