ಇಸ್ಲಾಮಾಬಾದ್ : ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ಹೈರಾಣವಾಗಿರುವ ಪಾಕಿಸ್ತಾನ ಇದೀಗ ಪೆಟ್ರೋಲ್ ದರವನ್ನು ಹೆಚ್ಚಳ ಮಾಡಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಪರಿಣಾಮ, ಪ್ರತಿ ಲೀಟರ್ ಪೆಟ್ರೋಲ್ ಬೆಲೆಯನ್ನು ಸುಮಾರು 10 ಪಾಕಿಸ್ತಾನಿ ರೂಪಾಯಿಯಷ್ಟು ಏರಿಕೆ ಮಾಡಲು ಮುಂದಾಗಿದೆ. ಈಗಾಗಲೇ ಪಾಕಿಸ್ತಾನದಲ್ಲಿ ಪ್ರಸ್ತುತ ಒಂದು ಲೀಟರ್ ಪೆಟ್ರೋಲ್ ಬೆಲೆ 279 ಪಾಕ್ ರೂಪಾಯಿ ಆಗಿದೆ.
ಇದನ್ನೂ ಓದಿ: ಲೋಕ ಸಮರಕ್ಕೆ ರಾಜ್ಯದ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್: ಯಾವ ಕ್ಷೇತ್ರದಲ್ಲಿ ಯಾರು ಎದುರಾಳಿ ಇಲ್ಲಿದೆ ಮಾಹಿತಿ
ಮುಂದಿನ 15 ದಿನಗಳಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆಯು 289 ರೂಪಾಯಿಗೆ ಏರಿಕೆಯಾಗಲಿದೆ. ಮತ್ತೊಂದೆಡೆ ಹೈಸ್ಪೀಡ್ ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ ಗೆ 1ರೂಪಾಯಿ 30 ಪೈಸೆ ಇಳಿಕೆ ಮಾಡಲಾಗಿದೆ. ಇದರಿಂದಾಗಿ ಹೈಸ್ಪೀಡ್ ಡೀಸೆಲ್ ಬೆಲೆ 285 ರೂಪಾಯಿ 86 ಪೈಸೆಯಿಂದ 284ರೂಪಾಯಿ 26 ಪೈಸೆಗೆ ಇಳಿಕೆಯಾಗಲಿದೆ.