Friday, May 10, 2024

T20 Cricket World Cup: ಏಪ್ರಿಲ್​ ಕೊನೆಯ ವಾರ ಟೀಂ ಇಂಡಿಯಾ ತಂಡ ಪ್ರಕಟ

ಮುಂಬೈ: ಜೂನ್ 1 ರಿಂದ ಜೂ.29 ರ ವರೆಗೆ ಅಮೇರಿಕ ಮತ್ತು ವೆಸ್ಟ್​ ಇಂಡೀಸ್​ ಆರ್ತಥ್ಯದಲ್ಲಿ ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿ ನಡೆಯಲಿದ್ದು, ಟೂರ್ನಿಯ ಪಂದ್ಯಾವಳಿಗಾಗಿ ಟೀಂ ಇಂಡಿಯಾದ 15 ಸದಸ್ಯರ ತಂಡ ಏಪ್ರಿಲ್​ ಕೊನೆಯ ಬಾರದಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಟೂರ್ನಿಯ ವೇಳಾಪಟ್ಟಿಯೂ ಈಗಾಗಲೇ ಪ್ರಕಟಗೊಂಡಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.

ಇದನ್ನೂ ಓದಿ: 1ಲೀ. ಪೆಟ್ರೋಲ್ ಬೆಲೆ ​ ₹289ಕ್ಕೆ ಏರಿಕೆ!

ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳು ಕೂಡ ಮೇ 1ರ ಒಳಗಡೆ ಆಟಗಾರರ ಅಂತಿಮ ಪಟ್ಟಿ ರಚಿಸಿ ಐಸಿಸಿಗೆ ನೀಡಬೇಕಿದೆ. ಇದೇ ಕಾರಣದಿಂದ ಆಯ್ಕೆ ಸಮಿತಿಯು ಭಾರತದ ಮೊದಲ ಸಂಭಾವ್ಯ ತಂಡವನ್ನು ಎಪ್ರಿಲ್‌ ಕೊನೆಯ ವಾರದಲ್ಲಿ ಪ್ರಕಟಿಸಲಿದೆ ಎನ್ನಲಾಗಿದೆ.

ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.

ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತವು 2024ರ ಟಿ 20 ವಿಶ್ವಕಪ್ ಆಡಲಿದೆ. ಟೂರ್ನಿಯಲ್ಲಿ ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

RELATED ARTICLES

Related Articles

TRENDING ARTICLES