Thursday, May 2, 2024

ಅಮಿತ್​ ಶಾ ವಿರುದ್ದ ವಾಗ್ದಾಳಿ: ಸಿಎಂ ಪುತ್ರ ಯತೀಂದ್ರಗೆ ಚುನಾವಣಾಧಿಕಾರಿಗಳಿಂದ ನೋಟೀಸ್​

ಚಾಮರಾಜನಗರ : ಸಿಎಂ ಸಿದ್ದರಾಮಯ್ಯ ಪುತ್ರ ಹಾಗು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಚಾಮರಾಜನಗರ ಜಿಲ್ಲಾಧಿಕಾರಿಗಳು ನೋಟೀಸ್​ ಜಾರಿ ಮಾಡಿದ್ದಾರೆ.

ಮಾರ್ಚ್​ 28ರಂದು ನಡೆದ ಹನೂರಿನ ಕಾಂಗ್ರೆಸ್​ ಕಾರ್ಯಕರ್ತರ ಸಭೆಯಲ್ಲಿ ಅಮಿತ್ ಶಾ ವಿರುದ್ದ ವಾಗ್ದಾಳಿ ಮಾಡಿದ್ದ ಯತೀಂದ್ರ ಅವರು ಅಮಿತ್​ ಶಾ ರನ್ನು ಗೂಂಡಾ, ರೌಡಿ ಎಂದು ಉಲ್ಲೇಖಿಸಿದ್ದರು ಈ ವಿಚಾರಕ್ಕೆ ಸಂಬಂಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಹಾಗು ಚುನಾವಣಾಧಿಕಾರಿಗಳಾದ ಸಿ.ಟಿ ಶಿಲ್ಪಾನಾಗ್​ ನೋಟೀಸ್​ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: IPL 2024: ಐಪಿಎಲ್​ನಲ್ಲಿಂದು RCB vs LSG ಹೈವೋಲ್ಟೇಜ್ ಪಂದ್ಯ

ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿರುವ ಹೇಳಿಕೆಗೆ ವಿವರಣೆ ನೀಡುವಂತೆ ನೋಟಿಸ್. ಸಹಾಯಕ ಚುನಾವಣಾಧಿಕಾರಿ, ಮಾದರಿ ನೀತಿ ಸಂಹಿತೆ ನೂಡಲ್ ಅಧಿಕಾರಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳಿಂದ ವರದಿ ಪಡೆದು ನೋಟಿಸ್ ಜಾರಿ ಮಾಡಿದ್ದಾರೆ.

ಕಾರ್ಯಕರ್ತರ ಸಭೆಯಲ್ಲಿ ವಾಗ್ದಾಳಿ. ಯತೀಂದ್ರ ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ” ಕೇಂದ್ರ ಗೃಹ ಸಚಿವ ಅಮಿತ್ ಶಾ ಓರ್ವ ಗೂಂಡಾ, ರೌಡಿ ಎಂದಿದ್ದರು. ಗುಜರಾತ್ ನಲ್ಲಿ ನರಮೇದ ಮಾಡಿದ ಆರೋಪ ಹೊತ್ತಿದ್ದವರು ಇಂದು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಇಂತವರನ್ನ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದರು. ಈ ಸಂಬಂಧ ಬಿಜೆಪಿ ಪಕ್ಷದಿಂದ ಬೆಂಗಳೂರಿನಲ್ಲಿ ದೂರು ದಾಖಲು ಮಾಡಿತ್ತು‌. ಈ ಹಿನ್ನೆಲೆಯಲ್ಲಿ ಯತೀಂದ್ರಗೆ ಚಾಮರಾಜನಗರ ಚುನಾವಣಾಧಿಕಾರಿ ನೋಟಿಸ್ ಜಾರಿ.

RELATED ARTICLES

Related Articles

TRENDING ARTICLES