Wednesday, May 8, 2024

ಎಂ. ಲಕ್ಷ್ಮಣ್ ಅಪ್ಪಟ ಒಕ್ಕಲಿಗ, ಬಿಜೆಪಿಯವರ ಸುಳ್ಳು ನಂಬಬೇಡಿ : ಸಿದ್ದರಾಮಯ್ಯ

ಮೈಸೂರು : ಎಂ. ಲಕ್ಷ್ಮಣ್ ಅವರು ಅಪ್ಪಟ ಒಕ್ಕಲಿಗರು. ಬಿಜೆಪಿ ನಾಯಕರ ಈ ಸುಳ್ಳು ಮತ್ತು ಅಪಪ್ರಚಾರವನ್ನು ನಂಬಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತದಾರರಿಗೆ ಕರೆ ಕೊಟ್ಟರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಅಭ್ಯರ್ಥಿ ಎಂ. ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಿಂದ ಬಂದು ಶ್ರಮದಿಂದ ಮೇಲೆ ಬಂದ ಕಾರ್ಯಕರ್ತ. ಇವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರವನ್ನು ವ್ಯಾಪಕವಾಗಿ ಮಾಡುತ್ತಿದ್ದಾರೆ. ಬಿಜೆಪಿ ಒಕ್ಕಲಿಗರಿಗೆ ಟಿಕೆಟ್ ತಪ್ಪಿಸಿದೆ ಎನ್ನುವ ಅಸಮಾಧಾನ ಹಲವರಲ್ಲಿದೆ. ಆ ಕಾರಣಕ್ಕೇ ಲಕ್ಷ್ಮಣ್ ಅವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕುಟುಕಿದರು.

ಮೋದಿ ರಾಜ್ಯಕ್ಕೆ ಮೇಲಿಂದ ಮೇಲೆ ಬರ್ತಾರೆ ನೋಡಿ

ನಮ್ಮ ನಾಡಿಗೆ ಪ್ರವಾಹ ಬಂದಾಗ ಪ್ರಧಾನಿ ಮೋದಿ ಬರಲಿಲ್ಲ. ಬರಗಾಲ ಬಂದಾಗಲೂ ಮೋದಿ ಬರಲಿಲ್ಲ. ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ. ಚುನಾವಣೆ ಬಂತು ನೋಡಿ, ಮೋದಿ ರಾಜ್ಯಕ್ಕೆ ಮೇಲಿಂದ ಮೇಲೆ ಬರ್ತಾರೆ ನೋಡಿ ಎಂದು ಲೇವಡಿ ಮಾಡಿದರು.

ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಲಿ

ಮೈಸೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮಾಡಿದ, ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಲಿ ಎಂದು ಸವಾಲ್ ಹಾಕಿದರು.

ನಮ್ಮ ಅಭ್ಯರ್ಥಿ ಲಕ್ಷ್ಮಣ್ ಸಂವಿಧಾನ ರಕ್ಷಣೆಯ ಧ್ವನಿ

ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ. ಇವರು ನಮ್ಮ ನಿಮ್ಮಲ್ಲರ ಧ್ವನಿಯಾಗಿ ಸಂಸತ್ತಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಸಿಎಂ ಸಿದ್ದರಾಮಯ್ಯ ಮತಯಾಚನೆ ಮಾಡಿದರು.

RELATED ARTICLES

Related Articles

TRENDING ARTICLES