Sunday, May 12, 2024

IPL 2024: ಐಪಿಎಲ್​ನಲ್ಲಿಂದು RCB vs LSG ಹೈವೋಲ್ಟೇಜ್ ಪಂದ್ಯ

ಬೆಂಗಳೂರು: ಐಪಿಎಲ್​ನಲ್ಲಿಂದು RCB vs LSG ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇಂದಿನ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಲೇ ಬೇಕು. 

ಹೌದು, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೇಂಟ್ಸ್ ತಂಡಗಳು ಮುಖಾಮುಖಿಯಾಲಿದ್ದು,ಇಂದು ರೋಚಕ ಪಂದ್ಯ ನಡೆಯುವ ನಿರೀಕ್ಷೆಗಳು ಇವೆ.

ಪಾಯಿಂಟ್ಸ್ ಟೇಬಲ್​ನಲ್ಲಿ ಮೇಲಕ್ಕೆ ಬರಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕು

ಇದುವರೆಗೂ ಆಡಿರುವ ಮೂರು ಪಂದ್ಯಗಳಿಂದ ಎರಡು ಅಂಕ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.ಮತ್ತೊಂದೆಡೆ, ಲಕ್ನೋ ಎರಡು ಪಂದ್ಯದಿಂದ 2 ಅಂಕಗಳನ್ನು ಹೊಂದಿ ಆರನೇ ಸ್ಥಾನದಲ್ಲಿದೆ. ಪಾಯಿಂಟ್ಸ್ ಟೇಬಲ್​ನಲ್ಲಿ ಮೇಲೇಳಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಾಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್‌ಕುಮಾರ್ ವೈಶಾಕ್ , ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ಲಕ್ನೋ ಸೂಪರ್ ಜೈಂಟ್ಸ್
ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ಆಯುಷ್ ಬಡೋನಿ, ನಿಕೋಲಸ್ ಪೂರನ್ (ನಾಯಕ), ಮಾರ್ಕಸ್ ಸ್ಟೋನಿಸ್, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಮಯಾಂಕ್ ಯಾದವ್, ಮಣಿಮಾರನ್ ಸಿದ್ಧಾರ್ಥ್.

ಇಂಪ್ಯಾಕ್ಟ್ ಪ್ಲೇಯರ್: ಆಷ್ಟನ್ ಟರ್ನರ್, ನವೀನ್-ಉಲ್-ಹಕ್, ಅಮಿತ್ ಮಿಶ್ರಾ, ದೀಪಕ್ ಹೂಡಾ, ಕೆ ಗೌತಮ್.

 

RELATED ARTICLES

Related Articles

TRENDING ARTICLES