Friday, May 17, 2024

ಕುಡಿದ ಮತ್ತಿನಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ಆನೇಕಲ್ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹೆಬ್ಬಗೋಡಿ ಮುತ್ಯಾಲಮ್ಮ ದೇವಾಲಯದ ಬಳಿ ನಡೆದಿದೆ.

ಒರಿಸ್ಸಾ ಮೂಲದ ದೀಪ್ತಿರಂಜನ್​ (30) ಕೊಲೆಯಾದ ವ್ಯಕ್ತಿ, ಏ.1 ರಾತ್ರಿ ರಂದು ಕೆಲಸ ಮುಗಿಸಿಕೊಂಡು ವಾಪಾಸ್ಸಾಗುತ್ತಿದ್ದ ವೇಳೆ ರಾತ್ರಿ 1 ಗಂಟೆ ಸುಮಾರಿಗೆ ಕೊಲೆ ನಡೆದಿದೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ, ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಆಕ್ಸ್​ಫರ್ಡ್​ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ

ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

RELATED ARTICLES

Related Articles

TRENDING ARTICLES