Sunday, May 5, 2024

ವಯಾನಾಡಿನಲ್ಲಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ

ವಯನಾಡ್: ಕೇರಳದ ವಯನಾಡಿನಲ್ಲಿ (ಏ.3) ಇಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇದರೊಂದಿಗೆ ಕೇರಳದಲ್ಲಿ ಕಾಂಗ್ರೆಸ್ ಮತ್ತು ಸಿಪಿಐ ನಡುವೆ ಪೈಪೋಟಿ ಏರ್ಪಟ್ಟಿದೆ. ರಾಹುಲ್ ಗಾಂಧಿ ವಿರುದ್ಧ ಅನ್ನಿ ರಾಜ ಅವರು ಕಣಕ್ಕಿಳಿದಿದ್ದಾರೆ.

CPI ಕೇರಳದ ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗದ ಪಾಲುದಾರ. CPI ಮತ್ತು ಕಾಂಗ್ರೆಸ್ ವಿರೋಧ ಪಕ್ಷದ ಇಂಡಿಯಾ ಬಣದಲ್ಲಿ ಪಾಲುದಾರರಾಗಿದ್ದರೆ. ಆದ್ರೆ ಎರಡು ಪಕ್ಷಗಳು ಕೇರಳದಲ್ಲಿ ತೀವ್ರ ಸ್ಪರ್ಧಿಗಳಾಗಿವೆ. ಉಭಯ ಪಕ್ಷಗಳು ತಮ್ಮ ಪ್ರಬಲ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸಿವೆ.

ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ. ರಾಜ ಅವರ ಪತ್ನಿ ಅನ್ನಿ ರಾಜ ಅವರು ಪಕ್ಷದ ರಾಷ್ಟ್ರೀಯ ಭಾರತೀಯ ಮಹಿಳಾ ಒಕ್ಕೂಟದಲ್ಲಿ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಹೊಂದಿದ್ದಾರೆ. ಮತ್ತು ಸಿಪಿಐ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಮಂಡ್ಯ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದ ಸಂಸದೆ ಸುಮಲತಾ ಅಂಬರೀಶ್​

ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ರಾಹುಲ್ ಗಾಂಧಿ ಅವರು ಬುಧವಾರ ಕಲ್ಪೆಟ್ಟಾ ಪಟ್ಟಣದಲ್ಲಿ ರ‍್ಯಾಲಿ ನಡೆಸಿದ್ದಾರೆ. ನಂತರ ವಯನಾಡ್‌ಗೆ ನಾಮಪತ್ರ ಸಲ್ಲಿಸಲಿದ್ದಾರೆ.  ಭಾರತೀಯ ಜನತಾ ಪಕ್ಷವು ತನ್ನ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಅವರನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಿದೆ.

2019 ರ ಲೋಕಸಭೆ ಚುನಾವಣೆಯಲ್ಲಿ 64.7 ಶೇಕಡಾ ಮತ ಪಡೆದುಕೊಂಡಿದ್ದ ರಾಹುಲ್ ಗಾಂಧಿ ವಯನಾಡ್‌ನಿಂದ 706,367 ಮತಗಳನ್ನು ಗಳಿಸಿದ್ದರು. ಎರಡನೇ ಸ್ಥಾನದಲ್ಲಿರುವ ಸಿಪಿಐ ಅಭ್ಯರ್ಥಿ ಪಿ ಪಿ ಸುನೀರ್ 274,597 ಮತಗಳನ್ನು ಪಡೆದು ಶೇ 25.1ರಷ್ಟು ಮತಗಳನ್ನು ತಮ್ಮದಾಗಿಸಿಕೊಂಡಿದ್ದರು.

2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) 20 ಸ್ಥಾನಗಳ ಪೈಕಿ, 19 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 15 ಸ್ಥಾನಗಳನ್ನು ಗೆದ್ದರೆ, ಅದರ ಮಿತ್ರಪಕ್ಷಗಳಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಎರಡು ಸ್ಥಾನಗಳನ್ನು ಗೆದ್ದುಕೊಂಡಿತ್ತು. ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ ಒಂದು ಸ್ಥಾನ ಮತ್ತು ಕೇರಳ ಕಾಂಗ್ರೆಸ್ (ಎಂ) ಒಂದು ಸ್ಥಾನ ಗೆದ್ದಿತ್ತು. ಅಲಪ್ಪುಳದಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಒಂದು ಸ್ಥಾನ ಗೆದ್ದುಕೊಂಡಿತ್ತು.

RELATED ARTICLES

Related Articles

TRENDING ARTICLES