Friday, May 17, 2024

ಸಾವನ್ನೇ ಗೆದ್ದು ಬಂದ ಸಾತ್ವಿಕ್, ತಾಯಿ ಮಡಿಲು ಸೇರಿದ್ದು ಕಂಡು ಖುಷಿಯಾಯಿತು : ಸಿದ್ದರಾಮಯ್ಯ

ಬೆಂಗಳೂರು : ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

ತೆರೆದ ಕೊಳವೆ ಬಾವಿಗೆ ಬಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಸಾತ್ವಿಕ್ ಕೊನೆಗೂ ಸಾವು ಗೆದ್ದು ಬಂದಿದ್ದು, ಈ ಬಗ್ಗೆ ಸಿಎಂ ಟ್ವೀಟ್ ಮಾಡಿದ್ದಾರೆ.

ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ ಎಂದು ಹೇಳಿದ್ದಾರೆ.

ಅಮಾಯಕ ಜೀವ ಬಲಿಯಾಗುತ್ತೆ

ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ. ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಕೋಟ್ಯಂತರ ಜನರ ಹರಕೆ ಫಲಿಸಿದೆ

ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ ಹಾರೈಕೆಗಳು ಫಲಿಸಿದೆ. ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

RELATED ARTICLES

Related Articles

TRENDING ARTICLES