Tuesday, May 21, 2024

ರೀಲ್ಸ್ ರಾಣಿ ಸೋನು ಗೌಡಗೆ ಜಾಮೀನು : ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆ

ಬೆಂಗಳೂರು : ಕಾನೂನು ಬಾಹಿರವಾಗಿ ಹೆಣ್ಣು ಮಗುವೊಂದನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರೀಲ್ಸ್ ಸ್ಟಾರ್ ಹಾಗೂ ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಬಿಗ್ ರಿಲೀಫ್​ ಸಿಕ್ಕಿದೆ.

ಈ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯ ಸೋನು ಗೌಡಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ನ್ಯಾಯಾಲಯದ ಆದೇಶದ ಅನ್ವಯ ಸೋನು ಶ್ರೀನಿವಾಸ್ ಗೌಡ ಅವರು ಇಂದು ರಾತ್ರಿ ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಸೋನು ಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ CJM ನ್ಯಾಯಾಲಯ ಆದೇಶ ನೀಡಿತ್ತು

JJ ಕಾಯ್ದೆ ಅಡಿ ಸೋನು ಗೌಡ ಅರೆಸ್ಟ್

ಸೋನು ಗೌಡ ಉತ್ತರ ಕರ್ನಾಟಕದ 8 ವರ್ಷದ ಬಾಲಕಿಯನ್ನು ದತ್ತು ತೆಗೆದುಕೊಂಡಿದ್ದರು. ಈ ವಿಷಯವನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದರು. ಕಾನೂನು ಉಲ್ಲಂಘಿಸಿದ್ದಕ್ಕೆ ಮಕ್ಕಳ ಕಲ್ಯಾಣ ಇಲಾಖೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಮಕ್ಕಳ ಆರೈಕೆ ಹಾಗೂ ರಕ್ಷಣೆ (JJ ಕಾಯ್ದೆ) ಕಾಯ್ದೆ ಅಡಿಯಲ್ಲಿ ಸೋನು ಗೌಡ ಅರೆಸ್ಟ್ ಆಗಿದ್ದರು.

RELATED ARTICLES

Related Articles

TRENDING ARTICLES