Thursday, May 9, 2024

ನಾಳೆ ಬೆಳಗ್ಗೆ 11.30ಕ್ಕೆ ಬಿಜೆಪಿ ಪಕ್ಷ ಸೇರುತ್ತೇನೆ : ಸುಮಲತಾ ‘ಕಮಲ’ ಹಿಡಿಯಲು ಮುಹೂರ್ತ ಫಿಕ್ಸ್

ಬೆಂಗಳೂರು : ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತೇನೆ ಎಂದು ಘೋಷಿಸಿದ್ದು, ಇದೀಗ ಅವರ ಪಕ್ಷ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ.

ಏಪ್ರಿಲ್ 5, ಅಂದರೆ ನಾಳೆ ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ನಡೆಯುವ ಪಕ್ಷ ಸೇರ್ಪಡೆ ಕಾರ್ಯಕ್ರದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ. ಬಿಜೆಪಿ ಪಕ್ಷ ಸೇರ್ಪಡೆ ಬಗ್ಗೆ ಸ್ವತಃ ಸುಮಲತಾ ಅಂಬರೀಶ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡಿದ್ದೆ. ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಬಿಜೆಪಿ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ ಎಂದು ಹೇಳಿದ್ದಾರೆ.

ಅಂಬಿ ಅಭಿಮಾನಿಗಳಿ ಸುಮಲತಾ ಮನವಿ

ಅದರಂತೆಯೇ, ಬಿಜೆಪಿ ನಾಯಕರ ಸಮ್ಮುಖದಲ್ಲಿ ಏಪ್ರಿಲ್ 5 ರಂದು ಶುಕ್ರವಾರ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ. ನಮ್ಮ ಕರುನಾಡಿನ ಸಕ್ಕರೆಯ ನಾಡು ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳು, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ಮನವಿ ಮಾಡಿದ್ದಾರೆ.

ಸುಮಲತಾ ಬೆಂಬಲಿಗರು ಬಿಜೆಪಿ ಸೇರ್ತಾರೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ, ಆರ್.‌ ಅಶೋಕ್‌, ಮಾಜಿ ಸಿಎಂ ಬಿ.ಎಸ್‌. ಬಿ.ಎಸ್.‌ ಯಡಿಯೂರಪ್ಪ, ಇಂಡುವಾಳು ಸಚ್ಚಿದಾನಂದ ಹಾಗೂ ಪಕ್ಷದ ಪ್ರಮುಖರ ಸಮ್ಮುಖದಲ್ಲಿ ಸುಮಲತಾ ಅಂಬರೀಶ್‌ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಸಂದರ್ಭದಲ್ಲಿ ಸುಮಲತಾ ಅಂಬರೀಶ್ ಅವರ ಬೆಂಬಲಿಗರು ಬಿಜೆಪಿ ಸೇರುವ ಸಾಧ್ಯತೆಯಿದೆ.

RELATED ARTICLES

Related Articles

TRENDING ARTICLES