Sunday, May 5, 2024

ಚುನಾವಣೆ ಬಂದಾಗ ರಾಹುಲ್ ಗಾಂಧಿ ಧರ್ಮವನ್ನು ಬಳಕೆ ಮಾಡುತ್ತಾರೆ : ಜೆ.ಪಿ. ನಡ್ಡಾ ಆರೋಪ

ನವದೆಹಲಿ : ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧರ್ಮವನ್ನು ಬಳಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆರೋಪಿಸಿದ್ದಾರೆ.

ಹರಿದ್ವಾರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಬೆಂಬಲಿಸಿ ಜೆ.ಪಿ. ನಡ್ಡಾ ಪ್ರಚಾರ ನಡೆಸಿದರು.

ಈ ವೇಳೆ ಮಾಯಾದೇವಿ ದೇಗುಲದಲ್ಲಿ ಸಾಧು, ಸಂತರನ್ನು ಉದ್ದೇಶಿಸಿ ಮಾತನಾಡಿದರು. ಕೆಲವರು ಚುನಾವಣೆ ಸಂದರ್ಭಗಳಲ್ಲಿ ಮಾತ್ರ ದೇವಾಲಯಕ್ಕೆ ಭೇಟಿ ನೀಡಿ ಧಾರ್ಮಿಕ ಆಚರಣೆಗಳಲ್ಲಿ ಭಾಗವಹಿಸುತ್ತಾರೆ ಎಂದು ರಾಹುಲ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಅಭಿವೃದ್ಧಿ ಹಾಗೂ ರಾಜಕೀಯ ಹೋರಾಟದಲ್ಲಿ ಹೋರಾಡುವ ಸಲುವಾಗಿ ಪ್ರಧಾನಿ ಮೋದಿಯನ್ನು ಮತ್ತೊಮ್ಮೆ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು. ವಿರೋಧ ಪಕ್ಷಗ ‘ಇಂಡಿಯಾ’ ಮೈತ್ರಿಕೂಟದ ನಾಯಕರು ಸನಾತನ ಧರ್ಮದ ವಿರುದ್ಧ ದಾಳಿ ಮಾಡುತ್ತಿದ್ದು, ಅಂಥವರಿಗೆ ನೀವು ಆಶೀರ್ವಾದ ನೀಡುವೀರಾ? ಎಂದು ಜೆ.ಪಿ. ನಡ್ಡಾ ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್​​ ಪ್ರಣಾಳಿಕೆ ಸುಳ್ಳುಗಳ ಕಂತೆ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ಸುಳ್ಳುಗಳ ಕಂತೆ ಆಗಿದ್ದು, ಮತದಾರರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಹಲವು ದಶಕಗಳ ಕಾಲ ದೇಶದಲ್ಲಿ ಅಧಿಕಾರ ನಡೆಸಿದ್ದ ಕಾಂಗ್ರೆಸ್ ಪಕ್ಷವು ಈ ಹಿಂದಿನ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಬಿಜೆಪಿ ದೂರಿದೆ.

RELATED ARTICLES

Related Articles

TRENDING ARTICLES