Tuesday, April 30, 2024

ಕೀಳುಮಟ್ಟದ ಟ್ವೀಟ್‌: ʻದರ್ಶನ್ʼ​ ಫ್ಯಾನ್ಸ್ ವಿರುದ್ಧ ದೂರು ನೀಡಲು ಮುಂದಾದ ಅಪ್ಪು ಅಭಿಮಾನಿಗಳು!

ಬೆಂಗಳೂರು: ಈ ಬಾರಿ ಆರ್‌ಸಿಬಿ ತಂಡ ನಾಲ್ಕು ಪಂದ್ಯಗಳಲ್ಲಿ ಮೂರು ಸೋತು, ಒಂದು ಮ್ಯಾಚ್​ ಗೆದ್ದಿದೆ. ಇದರ ಬೆನ್ನಲ್ಲೇ ದರ್ಶನ್‌ ಕೆಲ ಫ್ಯಾನ್ಸ್‌ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರನ್ನು ದೂರುತ್ತಿದ್ದಾರೆ.

‘ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ’ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಕೀಳು ಮಟ್ಟದ ಟ್ವೀಟ್ ಮಾಡಿದೆ.ಆರ್​ಸಿಬಿ ಸೋಲುವುದಕ್ಕೂ,ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೂ ಏನು ಸಂಬಂಧ? ಎಂದು ಅಪ್ಪು ಫ್ಯಾನ್ಸ್‌ ಆಕ್ರೋಶ ಹೊರಹಾಕುತ್ತಿದ್ದು, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಆರ್​ಸಿಬಿ ಅನ್​ಬಾಕ್ಸಿಂಗ್ ಇವೆಂಟ್​ಗೆ ಅಶ್ವಿನಿ ಅವರು ಕೂಡ ತೆರಳಿದ್ದರು. ‘ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ’ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಮೂಲಕ ಟ್ವೀಟ್ ಮಾಡಲಾಗಿದೆ.

ಈ ಟ್ವೀಟ್​ನಿಂದ ಪುನೀತ್ ರಾಜಕುಮಾರ್ ಫ್ಯಾನ್ಸ್ ಸದ್ಯ ಕೋಪಗೊಂಡಿದ್ದಾರೆ. ಕಾನೂನು ಕ್ರಮಕ್ಕೆ ಅಪ್ಪು ಅಭಿಮಾನಿಗಳು ಮುಂದಾಗಿದ್ದಾರೆ. ಈಗಾಗಲೇ ಟ್ವಿಟರ್‌ನಲ್ಲಿ ಈ ಬಗೆಗಿನ ಸ್ಕ್ರೀನ್‌ ಶಾಟ್‌ಗಳು ವೈರಲ್‌ ಆಗುತ್ತಿದೆ.

 

RELATED ARTICLES

Related Articles

TRENDING ARTICLES