Thursday, May 9, 2024

ಅಧಿಕೃತವಾಗಿ ಸುಮಲತಾ ಅಂಬರೀಶ್‌ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಂಡ್ಯ ಜಿಲ್ಲೆಯ ಸ್ವಾಭಿಮಾನಿ ಸಂಸದೆ ಸುಮಲತಾ ಇಂದು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. 

ಇಂದು ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಬಿಎಸ್‌ವೈ, ವಿಜಯೇಂದ್ರ ನೇತೃತ್ವದಲ್ಲಿ ಅಧಿಕೃತವಾಗಿ ಅವರು ಕಮಲ ಪಡೆ ಸೇರಿದ್ದರು.ಸುಮಲತಾಗೆ ರಾಕ್‌ಲೈನ್ ವೆಂಕಟೇಶ್‌, ಪುತ್ರ ಅಭಿಷೇಕ್ ಸಾಥ್ ನೀಡಿದ್ದಾರೆ.

ಕ್ರಿಕೆಟಿಗ ದೊಡ್ಡ ಗಣೇಶ ಮತ್ತು ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.

ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಸಂಸದ ಡಿ.ವಿ.ಸದಾನಂದಗೌಡ, ಶಾಸಕ ಮುನಿರತ್ನ
ಸಿ.ಟಿ.ರವಿ, ವಿಪಕ್ಷ ನಾಯಕ ಆರ್.ಅಶೋಕ್‌ ಉಪಸ್ಥಿತಿರಿದ್ದರು.

 

 

RELATED ARTICLES

Related Articles

TRENDING ARTICLES