Thursday, May 9, 2024

ಇಂದು ಸುಮಲತಾ ಅಂಬರೀಶ್‌ ಬಿಜೆಪಿ ಸೇರ್ಪಡೆ

ಮಂಡ್ಯ: ಈ ಬಾರಿ ಮಂಡ್ಯ ಲೋಕ ಕ್ಷೇತ್ರದ ಬಿಜೆಪಿ ಟಿಕೆಟ್‌ ವಂಚಿತರಾದ ಸುಮಲತಾ ಅಂಬರೀಶ್‌ ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆ ಆಗುತ್ತಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.

ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಯವರಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ಮನವಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES