Tuesday, May 14, 2024

ಟಾಸ್ ಗೆದ್ದ ಹೈದರಾಬಾದ್, ಚೆನ್ನೈ ಬ್ಯಾಟಿಂಗ್ : CSK ಬೆಂಕಿ ಬೌಲರ್ ಔಟ್?

ಬೆಂಗಳೂರು : ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಐಪಿಎಲ್​ನ 18 ನೇ ಪಂದ್ಯ ನಡೆಯುತ್ತಿದೆ. ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಈ ಟೂರ್ನಿಯ ಇತಿಹಾಸದಲ್ಲಿ ಅತಿದೊಡ್ಡ ಟಾರ್ಗೆಟ್ ಕಲೆಹಾಕಿದ ಸನ್‌ರೈಸರ್ಸ್ ಹೈದರಾಬಾದ್ ಗೆಲುವಿಗಾಗಿ ಸೆಣಸಲಿವೆ.

ಎರಡೂ ತಂಡಗಳು ತಮ್ಮ ಹಿಂದಿನ ಪಂದ್ಯಗಳಲ್ಲಿ ಸೋಲನ್ನು ಕಂಡಿವೆ. ಇಂದಿನ ಪಂದ್ಯವನ್ನು ಗೆದ್ದು ಮತ್ತೆ ಗೆಲುವಿನ ಟ್ರ್ಯಾಕ್‌ಗೆ ಮರಳಲು ಚೆನ್ನೈ ಹಾಗೂ ಹೈದರಾಬಾದ್ ರಣತಂತ್ರ ರೂಪಿಸಿವೆ. ಇಂದಿನ ಪಂದ್ಯದಲ್ಲಿ ಪತಿರಾಣ ಬದಲಿಗೆ ಮೊಯಿನ್ ಅಲಿ, ತೀಕ್ಷಣ ಮತ್ತು ಮುಖೇಶ್ ಚೌಧರಿ ಕಣಕ್ಕಿಳಿಯಲಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ

ಋತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಡೆರಿಲ್ ಮಿಚೆಲ್, ಶಿವಂ ದುಬೆ, ರವೀಂದ್ರ ಜಡೇಜಾ, ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಹಾರ್, ತುಷಾರ್ ದೇಶಪಾಂಡೆ, ಮಹೇಶ್ ತಿಕ್ಷಣ.

ಸನ್‌ರೈಸರ್ಸ್ ಹೈದರಾಬಾದ್ ತಂಡ

ಪ್ಯಾಟ್ ಕಮ್ಮಿನ್ಸ್ (ನಾಯಕ), ಅಭಿಷೇಕ್ ಶರ್ಮಾ, ಅಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್ (ವಿಕೆಟ್‌ ಕೀಪರ್), ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಜಯದೇವ್ ಉನಾದ್ಕಟ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್.

RELATED ARTICLES

Related Articles

TRENDING ARTICLES