Saturday, May 11, 2024

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿಲ್ಲ : ಸಿದ್ದರಾಮಯ್ಯ ಮಹಾ ಎಡವಟ್ಟು

ಕೋಲಾರ : ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾ ಎಡವಟ್ಟು ಮಾಡಿಕೊಂಡರು. ಕಾಂಗ್ರೆಸ್ ಕೆಲಸ ಮಾಡಲ್ಲ, ನುಡಿದಂತೆ ನಡೆಯಲ್ಲ ಎಂದು ಬಾಯಿ ತಪ್ಪಿ ಹೇಳಿದ ಸಿಎಂ, ತಕ್ಷಣವೇ ಸರಿಪಡಿಸಿಕೊಂಡು ಮುಜುಗರಕ್ಕೀಡಾದರು.

ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಗೌತಮ್​ ಪರ ಪ್ರಚಾರ ವೇಳೆ ಮಾತನಾಡಿದ ಅವರು, ಬಿಜೆಪಿ ನುಡಿದಂತೆ ನಡೆಯೋದಿಲ್ಲ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಒತ್ತಿ ಹೇಳಿದರು.

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸೋದಿಲ್ಲ. ಐದು ವರ್ಷಗಳ ಕಾಲ ಗ್ಯಾರಂಟಿ ಯೋಜನೆ ಮುಂದುವರಿಸುತ್ತೇವೆ. ಬಿಜೆಪಿಯವರು ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಆರ್ಥಿಕ ವ್ಯವಸ್ಥೆ ದಿವಾಳಿಯಾಗಲಿದೆ ಎಂದಿದ್ದರು. ನಾವು ಗ್ಯಾರಂಟಿ ಜಾರಿಗೊಳಿಸಿಲ್ಲವಾ? ಎಂದು ಕುಟುಕಿದರು.

ಬಿಜೆಪಿಯವರು ನಮಗೆ ಮೋಸ ಮಾಡಿಬಿಟ್ಟರು

ಬಿಜೆಪಿಯವರಂತೆ ನಾವು ಸುಳ್ಳು ಹೇಳಿಲ್ಲ. ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಬಿಜೆಪಿಯವರು ನಮಗೆ ಮೋಸ ಮಾಡಿಬಿಟ್ಟರು. ಮೊದಲು ಅಕ್ಕಿ ಕೊಡುತ್ತೇವೆ ಅಂದ್ರು. ಆಮೇಲೆ ಕೊಡೋದಿಲ್ಲ ಅಂತ ಹೇಳಿದರ. ಮೋಸ ಮಾಡಿ ಅಕ್ಕಿ ಕೊಡಲಿಲ್ಲ. ಅಕ್ಕಿಗೆ ಹಣ ಕೊಡುತ್ತೇವೆ ಕೊಡಿ ಎಂದರೂ ಕೊಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ನೀವು ಬಿಜೆಪಿಗೆ ವೋಟು ಹಾಕುತ್ತೀರಾ?

ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿಯವರು ನಡೆದುಕೊಂಡಿದ್ದಾರಾ? ಮೋದಿ 10 ವರ್ಷಗಳಲ್ಲಿ ನುಡಿದಂತೆ ನಡೆದುಕೊಂಡರಾ? ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದ್ದರು. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದರು ಮಾಡಿದ್ರಾ? ಈಗ ಡೀಸೆಲ್‌, ಪೆಟ್ರೋಲ್ ಬೆಲೆ ಏನಾಗಿದೆ? ಆ ಜೆಡಿಎಸ್ ನವರು ಬಿಜೆಪಿಯವರನ್ನ ಬೈಯ್ಯುತ್ತಿದ್ದರು. ಈಗ ಜೆಡಿಎಸ್ ನವರೂ ಕೋಮುವಾದಿಗಳಾಗುತ್ತಿದ್ದಾರೆ. ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಬಿಜೆಪಿಗೆ ವೋಟು ಹಾಕುತ್ತೀರಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

RELATED ARTICLES

Related Articles

TRENDING ARTICLES