Wednesday, May 8, 2024

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿನಿಯ ಸಾವು

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಅನುಮಾನಾಸ್ಪದ ಸಾವಿನ ಸರಣಿ ಮುಂದುವರೆದಿದ್ದು, ಓಹಿಯೋದ ಕ್ಲೀವ್‍ಲ್ಯಾಂಡ್ ಎಂಬಲ್ಲಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ನ್ಯೂಯಾರ್ಕ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಮೃತ ವಿದ್ಯಾರ್ಥಿನಿಯನ್ನು ಉಮಾ ಸತ್ಯ ಸಾಯಿ ಗಡ್ಡೆ ಎಂದು ಗುರುತಿಸಲಾಗಿದೆ. ಆಕೆ ಓಹಿಯೋದ ಕ್ಲೀವ್‍ಲ್ಯಾಂಡ್‍ನಲ್ಲಿ ವ್ಯಾಸಾಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿಯ ಸಾವಿನ ಬಗ್ಗೆ ಭಾರತೀಯ ದೂತವಾಸ ಕಚೇರಿ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಮೃತಳ ಕುಟುಂಬಕ್ಕೆ ಅಗತ್ಯ ನೆರವು ನೀಡುವುದಾಗಿ ಘೋಷಿಸಿದೆ. ಅಲ್ಲದೇ ಮೃತದೇಹವನ್ನು ಭಾರತಕ್ಕೆ ಸಾಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ರಾಯಭಾರ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ 7 ದಿನ ಮಳೆಯಾಗುವ ಸಾಧ್ಯತೆ

ಈ ಘಟನೆಯು ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳ ಮೇಲಿನ ದಾಳಿಯ ಸರಣಿಯ ಮತ್ತೊಂದು ಹೆಜ್ಜೆಯಾಗಿದೆ. ಅಲ್ಲದೇ ಮಾರ್ಚ್‍ನಲ್ಲಿ ಮೊಹಮ್ಮದ್ ಅಬ್ದುಲ್ ಅರಾಫತ್, ನಿಗೂಢವಾಗಿ ಕ್ಲೀವ್‍ಲ್ಯಾಂಡ್ ಪ್ರದೇಶದಿಂದ ನಾಪತ್ತೆಯಾಗಿದ್ದರು. ನಂತರ ಆತನ ಕುಟುಂಬಕ್ಕೆ ಆತನ ಬಿಡುಗಡೆಗೆ ಹಣ ನೀಡುವಂತೆ ಸುಲಿಗೆ ಕರೆ ಬಂದಿತ್ತು.

RELATED ARTICLES

Related Articles

TRENDING ARTICLES