Monday, May 20, 2024

ಟಾಸ್ ಸೋತ RCB ಮೊದಲು ಬ್ಯಾಟಿಂಗ್ : RCBಗೆ ಎಂಟ್ರಿ ಕೊಟ್ಟ ಸ್ಫೋಟಕ ಆಲ್‌ರೌಂಡರ್

ಬೆಂಗಳೂರು : ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಟಾಸ್ ಗೆದ್ದಿರುವ ರಾಜಸ್ತಾನ್‌ ರಾಯಲ್ಸ್‌ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಜೈಪುರದ ಸವಾಯ್‌ ಮಾನ್‌ಸಿಂಗ್‌ ಸ್ಟೇಡಿಯಂನಲ್ಲಿ ಐಪಿಎಲ್​ನ 19ನೇ ಪಂದ್ಯ nನಡೆಯುತ್ತಿದೆ. ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ರಾಜಸ್ತಾನ್‌ ರಾಯಲ್ಸ್‌ಗೆ ತವರಿನಲ್ಲೇ ಸೋಲುಣಿಸಲು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸಜ್ಜಾಗಿದೆ.

ಆರ್​ಸಿಬಿ ಹಾಗೂ ರಾಜಸ್ಥಾನ ಒಟ್ಟು 30 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 15 ಹಾಗೂ ರಾಜಸ್ಥಾನ 12 ಪಂದ್ಯದಲ್ಲಿ ಗೆಲುವು ಕಂಡಿದೆ. ಜೈಪುರದಲ್ಲಿ 8 ಪಂದ್ಯಗಳನ್ನು ಆಡಿದ್ದು, ಈ ಪೈಕಿ RCB 4 ಬಾರಿ ಹಾಗೂ RR 4 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಪ್ರಸ್ತುತ RR ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇತ್ತ, ಒಂದು ಪಂದ್ಯ ಗೆದ್ದಿರುವ RCB 8ನೇ ಸ್ಥಾನದಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI)

ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿ.ಕೀ.), ಸೌರವ್ ಚೌಹಾಣ್, ರೀಸ್ ಟೋಪ್ಲಿ, ಮಯಾಂಕ್ ಡಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI)

ಸಂಜು ಸ್ಯಾಮ್ಸನ್ (ನಾಯಕ/ವಿ.ಕೀ.), ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ನಾಂದ್ರೆ ಬರ್ಗರ್, ಯುಜ್ವೇಂದ್ರ ಚಾಹಲ್

RELATED ARTICLES

Related Articles

TRENDING ARTICLES