Monday, May 20, 2024

RCBಗೆ RR ಸವಾಲ್ : ಸತತ ಸೋಲಿನಿಂದ ಕಂಗೆಟ್ಟಿರುವ RCB ಗೆಲುವಿನ ಹಾದಿಗೆ ಮರಳುತ್ತಾ?

ಬೆಂಗಳೂರು : ಐಪಿಎಲ್​ನ 19ನೇ ಪಂದ್ಯ ಇಂದು ರಾಜಸ್ತಾನ್‌ ರಾಯಲ್ಸ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.

ಜೈಪುರದ ಸವಾಯ್‌ ಮಾನ್‌ಸಿಂಗ್‌ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಹಾಗಾದ್ರೆ, ಎರಡು ತಂಡಗಳು ಪರಸ್ಪರ ಎಷ್ಟು ಬಾರಿ ಮುಖಾಮುಖಿಯಾಗಿವೆ, ಎರಡು ತಂಡಗಳ ಪ್ಲೇಯಿಂಗ್‌ ಇಲೆವೆನ್‌ ಹೇಗಿರಬಹುದು, ಪಿಚ್‌ ಹೇಗಿದೆ? ಇಲ್ಲಿದೆ ನೋಡಿ ಮಾಹಿತಿ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ರಾಜಸ್ಥಾನ್‌ ರಾಯಲ್ಸ್‌ ತಂಡ ಒಟ್ಟು 30 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ಪೈಕಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 15 ರಲ್ಲಿ ಗೆಲುವು ಸಾಧಿಸಿದೆ. ರಾಜಸ್ಥಾನ್‌ ರಾಯಲ್ಸ್‌ 12 ಪಂದ್ಯದಲ್ಲಿ ಗೆಲುವು ಕಂಡಿದೆ. 3 ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯಕಂಡಿವೆ.

ಸವಾಯ್‌ ಮಾನ್‌ಸಿಂಗ್‌ ಸ್ಟೇಡಿಯಂನಲ್ಲಿ ಒಟ್ಟು 8 ಪಂದ್ಯಗಳಲ್ಲಿ ಸೆಣಸಿವೆ. ಈ ಪೈಕಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 4 ಬಾರಿ ಗೆಲುವು ಸಾಧಿಸಿದೆ. ರಾಜಸ್ಥಾನ್‌ ರಾಯಲ್ಸ್‌ ಕೂಡ 4 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಅಂಕಪಟ್ಟಿಯಲ್ಲಿ ಆರ್​ಆರ್ 2ನೇ ಸ್ಥಾನದಲ್ಲಿದೆ. ಆರ್​ಸಿಬಿ 8ನೇ ಸ್ಥಾನದಲ್ಲಿದೆ.

ಜೈಪುರ ಹೇಗಿದೆ ಪಿಚ್‌..?

ಜೈಪುರ ಕ್ರೀಡಾಂಗಣ ವೇಗಿಗಳು, ಸ್ಪಿನ್ನರ್‌ಗಳಿಗೆ ಅನುಕೂಲವಾಗಲಿದೆ. ಬ್ಯಾಟರ್‌ಗಳು ಎಚ್ಚರಿಕೆಯಿಂದ ಆಡಿದ್ರೆ ಬಿಗ್‌ ಸ್ಕೋರ್ ಪಕ್ಕಾ. ದೊಡ್ಡ ಮೊತ್ತ ಕಲೆ ಹಾಕುವ ತಂಡಕ್ಕೆ ಗೆಲುವು ಖಚಿತ. ಆದರೆ, ಚೇಸ್‌ ಮಾಡಿರುವ ತಂಡವೇ ಹೆಚ್ಚು ಬಾರಿ ಗೆದ್ದಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು  

ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜ್ಯಾಕ್ಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ಮಯಾಂಕ್ ಡಾಗರ್, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್, ವೈಶಾಕ್ ವಿಜಯಕುಮಾರ್

ರಾಜಸ್ಥಾನ್‌ ರಾಯಲ್ಸ್‌

ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಶಿಮ್ರೋನ್ ಹೆಟ್ಮಯರ್, ರಿಯಾನ್ ಪರಾಗ್, ಧ್ರುವ ಜುರೆಲ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್, ಟ್ರೆಂಟ್ ಬೌಲ್ಟ್, ನಾಂದ್ರೆ ಬರ್ಗರ್

RELATED ARTICLES

Related Articles

TRENDING ARTICLES