Thursday, May 9, 2024

ರಾಜ್ಯದಲ್ಲಿ 7 ದಿನ ಮಳೆಯಾಗುವ ಸಾಧ್ಯತೆ

ಬೆಂಗಳೂರು : ರಾಜ್ಯವು ಮುಂದಿನ ಏಳು ದಿನಗಳ ಕಾಲ ಬಿಸಿ ಗಾಳಿ ಮತ್ತು ಮಳೆ ಎರಡಕ್ಕೂ ಸಾಕ್ಷಿಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್‌ 6 ಮತ್ತು ಏಪ್ರಿಲ್‌ 7 ರಂದು ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಬಿಸಿ ಗಾಳಿ ಇರಲಿದೆ. ಅಂದು ಕೊಡಗು, ಚಿಕ್ಕಮಗಳೂರು ಮತ್ತು ಮಂಡ್ಯ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ತಾಪಮಾನ ಏರಿಕೆ, ವೈದ್ಯಕೀಯ ಕಾಲೇಜು ಹಾಸ್ಟೆಲ್‌ನ ವಿದ್ಯಾರ್ಥಿಗಳು ಅಸ್ವಸ್ಥ, ಕಾಲರ ಭೀತಿ

ಏಪ್ರಿಲ್‌ 8 ರಂದು ಕೊಡಗು, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಏಪ್ರಿಲ್‌ 9 ಮತ್ತು 10 ರಂದು ಬಹುತೇಕ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

RELATED ARTICLES

Related Articles

TRENDING ARTICLES