Thursday, May 9, 2024

ರಾಜ್ಯದಲ್ಲಿ 10ಕ್ಕೆ ಏರಿಕೆಯಾದ ಕಾಲರಾ ಕೇಸ್​; ಬೆಂಗಳೂರಿನಲ್ಲಿಯೇ 6 ಪ್ರಕರಣಗಳು!

ಬೆಂಗಳೂರು: ರಾಜ್ಯದಲ್ಲಿ ಕಾಲರಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಹೌದು, ಬೆಂಗಳೂರು ನಗರ ವ್ಯಾಪ್ತಿಯಲ್ಲಿಯೇ 6 ಕಾಲರಾ ಕೇಸ್​ಗಳು ಪತ್ತೆಯಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 3 ಮತ್ತು ರಾಮನಗರ ಜಿಲ್ಲೆಯಲ್ಲಿ 1 ಕೇಸ್ ಬೆಳಕಿಗೆ ಬಂದಿದೆ. ಈ ಮೂಲಕ 10ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 4 ವರ್ಷಗಳ ಕಾಲರಾ ಪ್ರಕರಣಗಳ ಅಂಕಿ ಅಂಶಗಳನ್ನು ನೋಡಿದರೆ, ಪ್ರತಿವರ್ಷ ಕ್ರಮವಾಗಿ 30, 40, 48 ಪ್ರಕರಣಗಳು ದಾಖಲಾಗಿದೆ. ಆದರೆ, ಈ ಬಾರಿ ಈಗಾಗಲೇ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ 6 ರಿಂದ 7 ಪ್ರಕರಣಗಳು ವರದಿಯಾಗಿವೆ.

ಕಾರು ಡ್ರೈವರ್​ಗೆ ಕಾಲರಾ ಪಾಸಿಟಿವ್
ಬೆಂಗಳೂರಿನ ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಕಾಲರಾ ಪ್ರಕರಣ ಪತ್ತೆಯಾಗಿದ್ದು, ಕಾರು ಚಾಲಕನಿಗೆ ಕಾಲರಾ ಪಾಸಿಟಿವ್ ದೃಢಪಟ್ಟಿದೆ.

ಬಿಎಂಸಿ ಹಾಸ್ಟೆಲ್ ವಿದ್ಯಾರ್ಥಿನಿಯರಲ್ಲಿ ಕಾಲರಾ ಪತ್ತೆ
ಬಿಎಂಸಿ ಹಾಸ್ಟೆಲ್ ವಿದ್ಯಾರ್ಥಿನಿಯರಲ್ಲಿ ಕಾಲರಾ ಪತ್ತೆ ಹಿನ್ನೆಲೆ ವಿದ್ಯಾರ್ಥಿನಿಯರಲ್ಲಿ ಆತಂಕ ಹೆಚ್ಚಿದೆ. ಅಶ್ವಸ್ಥ 49 ವಿದ್ಯಾರ್ಥಿಗಳ ಪೈಕಿ ಇಬ್ಬರಲ್ಲಿ ಕಾಲರಾ ಪತ್ತೆ ಆಗಿತ್ತು.

RELATED ARTICLES

Related Articles

TRENDING ARTICLES