Thursday, May 9, 2024

RSS ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ, ಕ್ಷಮಿಸಿ : ಪ್ರಜ್ವಲ್​ ರೇವಣ್ಣ

ಹಾಸನ : ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ, ಈ ಸಭೆಯಲ್ಲಿ RSS ಮುಖಂಡರು ಅಥವಾ ಕಾರ್ಯಕರ್ತರಿದ್ದರೆ ನನ್ನನ್ನು ಕ್ಷಮಿಸಿ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಅವರು, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಜೆಡಿಎಸ್​ ಮತ್ತು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ನನ್ನ ಗಮನಕ್ಕೆ ಬಾರದೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದೇನೆ. ನಾನೊಬ್ಬ ಯುವಕನಾಗಿ ಹೋರಾಟದ ಮೂಲಕ ಮಾತನಾಡುತ್ತಿದ್ದೆ. ಆದರೆ, ಇವತ್ತು ಅರಿವಾಗಿದೆ, ಹಾಗಾಗಿ ನಿಮ್ಮೆಲ್ಲರ ಕ್ಷಮೆ ಕೇಳುತ್ತೇನೆ ಎಂದರು.

ಇದನ್ನೂ ಓದಿ: ತಾಪಮಾನ ಏರಿಕೆ, ವೈದ್ಯಕೀಯ ಕಾಲೇಜು ಹಾಸ್ಟೆಲ್‌ನ ವಿದ್ಯಾರ್ಥಿಗಳು ಅಸ್ವಸ್ಥ, ಕಾಲರ ಭೀತಿ

ನಾನು ಲೋಕಸಭೆಗೆ ಆಯ್ಕೆಯಾದ ಸಂದರ್ಭದಲ್ಲಿ ನನಗೆ 27 ವರ್ಷ ವಯಸ್ಸು, ಐದು ವರ್ಷ ಸಂಸದನಾಗಿ ಕೆಲಸ ಮಾಡಿದ್ದೇನೆ. ​ಐದು ವರ್ಷ ಮಾಡಿದ ಕೆಲಸ, ಪ್ರಗತಿ ಬಗ್ಗೆ ಯಾರೂ ಪ್ರಶ್ನೆ ಮಾಡಲ್ಲ. ಪ್ರಜ್ವಲ್‌ ರೇವಣ್ಣ ಗೆದ್ದರೆ ಬಿಜೆಪಿ ಕಾರ್ಯಕರ್ತರನ್ನು ತೆಗೆದುಕೊಂಡು ಹೋಗುವ ಕೆಲಸ ಮಾಡ್ತಾನಾ ಎಂಬ ಪ್ರಶ್ನೆ ನಿಮ್ಮಲ್ಲಿದೆ. ನಮ್ಮ ರಾದಾ ಮೋಹನ್ ದಾಸ್ ಅವರು ಹೇಳಿದ್ದಾರೆ. ನಮ್ಮದು ಕಾಂಟ್ರಾಕ್ಟ್ ಮದುವೆ ಅಲ್ಲ, ಐವತ್ತು, ಅರವತ್ತು ವರ್ಷ ಕೊಂಡೊಯ್ಯುವ ಸಂಬಂಧ ಎಂದು.

ಜೆಡಿಎಸ್-ಬಿಜೆಪಿ ಪ್ರತಿಯೊಬ್ಬರನ್ನೂ ಕಾರ್ಯಕರ್ತರನ್ನು ಗೌರವಿಸಿ, ಒಗ್ಗಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲೆ ಇರಲಿ ಎಂದು ಹೇಳಿದರು.

RELATED ARTICLES

Related Articles

TRENDING ARTICLES