Friday, May 3, 2024

ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್ ಆಯ್ಕೆ : ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿ ಕನ್ನಡಿಗ ರಾಹುಲ್

ಬೆಂಗಳೂರು : ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಲಕ್ನೋನಾ ಏಕನಾ ಕ್ರೀಡಾಂಗಣದಲ್ಲಿ ಐಪಿಎಲ್ 21 ನೇ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್  ಮೊದಲ ಬಾರಿಗೆ ಮುಖಾಮುಖಿಯಾಗಿವೆ.

ಕೆ.ಎಲ್. ರಾಹುಲ್ ಸಾರಥ್ಯದ ಲಕ್ನೋ ಹ್ಯಾಟ್ರಿಕ್ ಗೆಲುವು ದಾಖಲಿಸುವ ಇರಾದೆಯಲ್ಲಿದೆ. ಗುಜರಾತ್ ಕಳೆದ ಪಂದ್ಯದಲ್ಲಿ ಪಂಜಾಬ್ ವಿರುದ್ಧದ ಸೋಲಿನ ಗಾಯವನ್ನು ಮರೆಯಲು ಪ್ರಯತ್ನಿಸುತ್ತಿದೆ. ಹೀಗಾಗಿ ಎರಡು ತಂಡಗಳ ನಡುವೆ ಕಠಿಣ ಪೈಪೋಟಿ ನಡೆಯುವುದು ಖಚಿತ.

ಐಪಿಎಲ್‌ನಲ್ಲಿ ಈವರೆಗೆ ಲಕ್ನೋ ಮತ್ತು ಗುಜರಾತ್ ನಡುವೆ ನಾಲ್ಕು ಪಂದ್ಯಗಳು ನಡೆದಿವೆ. ಈ ಪೈಕಿ ಗುಜರಾತ್ ತಂಡ ನಾಲ್ಕೂ ಪಂದ್ಯಗಳನ್ನು ಗೆದ್ದಿದೆ. ಲಕ್ನೋ ಪಂದ್ಯ ಒಂದೂ ಪಂದ್ಯವನ್ನು ಗೆದ್ದಿಲ್ಲ. ತವರು ಅಂಗಳದಲ್ಲಿ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಗಿಲ್ ಪಡೆಗೆ ಸೋಲುಣಿಸಲು ರಾಹುಲ್ ಬಾಯ್ಸ್​ ರಣತಂತ್ರ ರೂಪಿಸಿದೆ.

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI)

ಕೆ.ಎಲ್. ರಾಹುಲ್(ನಾಯಕ/ವಿ.ಕೀ), ಕ್ವಿಂಟನ್ ಡಿ ಕಾಕ್, ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಯಶ್ ಠಾಕೂರ್, ನವೀನ್-ಉಲ್-ಹಕ್, ಮಯಾಂಕ್ ಯಾದವ್

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI)

ಶುಭಮನ್ ಗಿಲ್(ನಾಯಕ), ಶರತ್ ಬಿ.ಆರ್(ವಿ.ಕೀ), ಸಾಯಿ ಸುದರ್ಶನ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಉಮೇಶ್ ಯಾದವ್, ಸ್ಪೆನ್ಸರ್ ಜಾನ್ಸನ್, ದರ್ಶನ್ ನಲ್ಕಂಡೆ, ಮೋಹಿತ್ ಶರ್ಮಾ

RELATED ARTICLES

Related Articles

TRENDING ARTICLES