Sunday, May 5, 2024

ಯುವಕರು ಉದ್ಯೋಗ ಹುಡುಕಲು ಹೆಣಗಾಡುತ್ತಿದ್ದಾರೆ : ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ಯುವಕರು ಉದ್ಯೋಗಗಳನ್ನು ಹುಡುಕಲು ಹೆಣಗಾಡುತ್ತಿದ್ದಾರೆ ಮತ್ತು ದೇಶವು ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ಬಿಜೆಪಿ ಹೇರಿರುವ ನಿರುದ್ಯೋಗವೇ ದೊಡ್ಡ ಸಮಸ್ಯೆಯಾಗಿದೆ. ಮೋದಿ ಸರ್ಕಾರದ ಅಡಿಯಲ್ಲಿ ಯುವ ನಿರುದ್ಯೋಗ ದರವು 2014 ರಿಂದ ಮೂರು ಪಟ್ಟು ಹೆಚ್ಚಾಗಿದೆ ಎಂದು ಕುಟುಕಿದ್ದಾರೆ.

ಯುವ ನ್ಯಾಯ ಅಡಿಯಲ್ಲಿ ಕಾಂಗ್ರೆಸ್ ‘ಪೆಹ್ಲಿ ನೌಕ್ರಿ ಪಕ್ಕಿ’ ಗ್ಯಾರಂಟಿಯು ಕೆಲಸ ಮತ್ತು ಕಲಿಕೆಯನ್ನು ಪ್ರತ್ಯೇಕಿಸುವ ಅಡೆತಡೆಗಳನ್ನು ತೆಗೆದುಹಾಕುತ್ತದೆ. ಆ ಮೂಲಕ ವೃತ್ತಿ ಬೆಳವಣಿಗೆಗೆ ಹೊಸ ಮಾರ್ಗಗಳನ್ನು ತೆರೆಯುತ್ತದೆ. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೇರಿರುವ ನಿರುದ್ಯೋಗವೇ ದೇಶದಲ್ಲಿ ದೊಡ್ಡ ಸಮಸ್ಯೆಯಾಗಿದೆ. ನಮ್ಮ ಯುವಕರು ಉದ್ಯೋಗಗಳನ್ನು ಹುಡುಕಲು ಹೆಣಗಾಡುತ್ತಿದ್ದಾರೆ ಮತ್ತು ಇದು ಜನರಿಗೆ ದುಃಸ್ವಪ್ನವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಸತ್ಯಕ್ಕೆ ಜಯ ಸಿಗಲಿದೆ ಎಂದ ಪ್ರಿಯಾಂಕಾ

ಹಿಮಾಚಲ ಪ್ರದೇಶದಲ್ಲಿ ಏಕಕಾಲಕ್ಕೆ ನಡೆಯಲಿರುವ ಲೋಕಸಭೆ ಚುನಾವಣೆ ಮತ್ತು ವಿಧಾನಸಭಾ ಉಪ ಚುನಾವಣೆಗಳಲ್ಲಿ ರಾಜ್ಯದ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾರೆ ಮತ್ತು ಸತ್ಯಕ್ಕೆ ಜಯ ಸಿಗಲಿದೆ. ಸತ್ಯವು ಮೇಲುಗೈ ಸಾಧಿಸುತ್ತದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ, ನಾನು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರನ್ನು ಭೇಟಿ ಮಾಡಿದ್ದೇನೆ. ಅವರ ಒಗ್ಗಟ್ಟು, ಕಠಿಣ ಪರಿಶ್ರಮ, ಚುನಾವಣೆಯಲ್ಲಿ ಪ್ರಬಲವಾಗಿ ಸ್ಪರ್ಧಿಸುವ ಅವರ ಧೈರ್ಯ ಮತ್ತು ಜನರಿಗೆ ಸೇವೆ ಸಲ್ಲಿಸಲು ಅವರಲ್ಲಿರುವ ಸಮರ್ಪಣೆಯ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

RELATED ARTICLES

Related Articles

TRENDING ARTICLES