Sunday, May 5, 2024

ಶೋಭಾ ಕರಂದ್ಲಾಜೆ ಅವರನ್ನು ಇಲ್ಲಿಂದಲೂ ವಾಪಾಸ್ ಕಳಿಸಿ: ಮತದಾರರಿಗೆ ಸಿಎಂ ಕರೆ

ಬೆಂಗಳೂರು : ಪ್ರೊ.ರಾಜೀವ್ ಗೌಡ ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿ. ಇವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದೇ ಗೆಲ್ಲುವ ಅವಕಾಶಗಳಿವೆ ಎಂದು ಸಿ.ಎಂ.ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ‌ ಮಹಿಳಾ ಸಮಾವೇಶ ಮತ್ತು ಬೂತ್ ಮುಖಂಡರುಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಂದಲೇ ಗೋ-ಬ್ಯಾಕ್ ಅನ್ನಿಸಿಕೊಂಡ ಶೋಭಾ ಕರಂದ್ಲಾಜೆ ಅವರಿಗೆ ಇಲ್ಲಿ ಟಿಕೆಟ್ ಕೊಟ್ಟಿದ್ದಾರೆ. ಉತ್ತರ ಲೋಕಸಭಾ ಕ್ಷೇತ್ರದ ಪ್ರಜ್ಞಾವಂತ ಮತದಾರರು ಶೋಭಾ ಅವರಿಗೆ ಇಲ್ಲಿಂದಲೂ ನೀವು ವಾಪಾಸ್ ಕಳಿಸಿ ಎಂದು ಕರೆ ನೀಡಿದರು.

ಇದನ್ನೂ ಓದಿ: ಅಶ್ವಿನಿ ಪುನೀತ್ ರಾಜ್​ಕುಮಾರ್ ನಿಂದನೆ: ಕಿಡಿಗೇಡಿಗಳಿಗೆ ಸಿಎಂ ವಾರ್ನಿಂಗ್​

ಶೋಭಾ ಕರಂದ್ಲಾಜೆ ಅವರು ಐದು ವರ್ಷಗಳ ಕಾಲ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ಒಂದೇ ಒಂದು ದಿನವೂ ದ್ವನಿ ಎತ್ತಲಿಲ್ಲ. ಇಂಥವರಿಂದ ನಿಮ್ಮ ಮತಕ್ಕೆ ಬೆಲೆ ಬರುತ್ತದಾ? ನೀತಿ ಆಯೋಗದ ಉಪಾಧ್ಯಕ್ಷರಾಗಿ, ಉನ್ನತ ಶೈಕ್ಷಣಿಕ ಅರ್ಹತೆ ಮತ್ತು ತಿಳಿವಳಿಕೆ ಹೊಂದಿ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ನಿರಂತರವಾಗಿ ಧ್ವನಿ ಎತ್ತುವ ರಾಜೀವ್ ಗೌಡರಿಂದ ನಿಮ್ಮ ಮತಕ್ಕೆ ಉತ್ತಮ ಘನತೆ ಬರುತ್ತದೆ. ಆದ್ದರಿಂದ ಪ್ರಜ್ಞಾವಂತರಾಗಿ ಇವರನ್ನು ಗೆಲ್ಲಿಸಿ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

ಈ ವೇಳೆ ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರೊ.ರಾಜೀವ್ ಗೌಡ ಮತ್ತು 400 ಕ್ಕೂ ಅಧಿಕ ಮಂದಿ ಬೂತ್ ಮಟ್ಟದ ಮಹಿಳಾ ಮುಖಂಡರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES