Sunday, May 12, 2024

ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ದಾರುಣ ಸಾವು

ಕಾರವಾರ : ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಫಯಾಜ್ ರೋಣ, ಪತ್ನಿ ಆಫ್ರಿನಾ ಬಾನು, ಅಣ್ಣನ ಮಗ ಆಯಾನ್ ರೋಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳು ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ.

ಮಾರ್ಚ್ 26ರಂದು ರಾತ್ರಿ ಮಕ್ಕಾ ಮದೀನಾಕ್ಕೆ ತೆರಳಿದ್ದರು. ಏಪ್ರಿಲ್ 6ರ ರಾತ್ರಿ ಮಕ್ಕಾ ಮದೀನಾ ಸಮೀಪ ವಿದೇಶದಲ್ಲಿ ರಸ್ತೆ ಅಪಾಘಾತ ಸಂಭವಿಸಿದ ಪರಿಣಾಮ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಮೂವರು ದುರ್ಮರಣ ಹೊಂದಿದ್ದಾರೆ. ಘಟನೆಯಿಂದ ಆಘಾತಗೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸುದ್ದಿ ಓದಿದ್ದೀರಾ? : ಬಟ್ಟೆ ತೊಳೆಯಲು ಹೋಗಿದ್ದ ತಾಯಿ ಹಾಗೂ ಇಬ್ಬರು ಮಕ್ಕಳು ನೀರುಪಾಲು

ಬಸ್​​​ ಪಲ್ಟಿಯಾಗಿ ಮೂವರು ಸಾವು

ಖಾಸಗಿ ಬಸ್​​​ ​​ಪಲ್ಟಿಯಾಗಿ ಮೂವರು ಪ್ರಯಾಣಿಕರು ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಹೊಳಲ್ಕೆರೆ ಕಣಿವೆ ಬಳಿ ನಡೆದಿದೆ. ಮೂವರು ಮೃತರ ಪೈಕಿ ಇಬ್ಬರ ಗುರುತು ಪತ್ತೆ ಹಚ್ಚಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ಮೂಲದ ಗಣಪತಿ, ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ಜಗದೀಶ್ ಮೃತ ದುರ್ದೈವಿಗಳು. ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

RELATED ARTICLES

Related Articles

TRENDING ARTICLES