Sunday, May 5, 2024

ವಿದ್ಯಾರ್ಥಿಗಳಿಗೆ ಡ್ರಗ್​ ಸಪ್ಲೈ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ

ಬೆಂಗಳೂರು : ನಿಷೇಧಿತ ಡ್ರಗ್​ಗಳನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಸ್ಟೂಡೆಂಟ್​ ವೀಸಾದಡಿ ಭಾರತಕ್ಕೆ ಬಂದಿದ್ದ ನೈಜೀರಿಯಾ ಮೂಲದ ವಿದೇಶಿ ಪ್ರಜೆ ಹೆನ್ರಿ ಚುಕ್​ವ್ಯುಮೆಕ್​, ವೀಸಾ ಅವಧಿ ಮುಗಿದಿದ್ದರು ಸಹ ಅಕ್ರಮವಾಗಿ ನಗರದಲ್ಲಿ ನೆಲಸಿದ್ದ. ವಿದೇಶದಲ್ಲಿನ ಪರಿಚಯಸ್ಥ ಪೆಡ್ಲರ್​ಗಳಿಂದ ಡ್ರಗ್​ ತರಿಸಿಕೊಂಡು ಹೆಚ್ಚಿನ ಬೆಲೆ ನಗರದಲ್ಲಿರುವ ವಿದ್ಯಾರ್ಥಿಗಳಿಗೆ, ಪರಿಚಯಸ್ಥರಿಗೆ, ಐಟಿ/ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದ.

ಈ ಕುರಿತು ಬಾಗಲಕುಂಟೆ ಪೊಲೀಸ್​ ಠಾಣಾಯಲ್ಲಿ ದೂರು ದಾಖಲಾಗಿತ್ತು, ಖಚಿತ ಮಾಹಿತಿ ಮೇರೆಗೆ ಸಿಸಿಬಿ ಮಾದಕವಸ್ತುಗಳ ನಿಗ್ರಹದಳ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಬಂಧಿತನಿಂದ ನಾಲ್ಕು ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟೆಲ್​ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯ ಬರ್ಬರ ಹತ್ಯೆ

ಇನ್ನು, ಬೆಂಗಳೂರಿನಲ್ಲಿ ಮಾದಕ ವಸ್ತು (ಡ್ರಗ್ಸ್​) ಮಾರಾಟ ಮಾಡುತ್ತಿದ್ದ ಮತ್ತೊಂದು ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಾಬಾಜ್ಯೋತಿ ಡಿಯೋಲ, ಬಂದಿತ ಆರೋಪಿ,  ಕಳೆದ 12 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಸೆಕ್ಯೂರಿಟಿ ಗಾರ್ಡ್​ ಆಗಿ ಕೆಲಸಕ್ಕೆ ಸೇರಿದ್ದ ಆರೋಪಿ ಬಳಿಕ ಡೆಲಿವರಿ ಬಾಯ್​ ಆಗಿ ಕೆಲಸ ಮಾಡುತ್ತಿದ್ದ.

ಈ ನಡುವೆ ಒರಿಸ್ಸಾದ ಬಾಲಸೂರ್​ ನಿಂದ ಗಾಂಜಾ ಖರೀದಿಸಿ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ, ಈ ಅಕ್ರಮ ಡ್ರಗ್​ ಮಾರಾಟ ಜಾಲದ ಪ್ರಕರಣಕ್ಕೆ ಸಂಬಂಧಿಸಿ ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬಂಧಿತನಿಂದ 10 ಲಕ್ಷ ಮೌಲ್ಯದ ಮಾದಕವಸ್ತು, ಗಾಂಜಾ ವಶಕ್ಕೆ ಪಡೆದಿದ್ದಾರೆ.

RELATED ARTICLES

Related Articles

TRENDING ARTICLES